ಮಂಗಳವಾರ, ಏಪ್ರಿಲ್ 7, 2020
19 °C

ನ್ಯಾಯಬೆಲೆ ಅಂಗಡಿಗಳಲ್ಲಿ  ಮೊಬೈಲ್ ಒ.ಟಿ.ಪಿ ಮೂಲಕ ಪಡಿತರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಬಯೋ ಮೆಟ್ರಿಕ್ ಮೂಲಕ ಪಡಿತರ ವಿತರಿಸುವುದರ ಬದಲು ಆಧಾರ್ ಆಧಾರಿತ ಮೊಬೈಲ್ ಒ.ಟಿ.ಪಿ. ಮೂಲಕ ಪಡಿತರ ವಿತರಿಸುವಂತೆ ಜಿಲ್ಲಾಧಿಕಾರಿ ಶರತದ ಬಿ. ಅವರು ಪಡಿತರ ಅಂಗಡಿದಾರರಿಗೆ ಸೂಚನೆ‌ ನೀಡಿದ್ದಾರೆ.

ಪಡಿತರ ಚೀಟಿದಾರರ ಮೊಬೈಲ್ ಸಂಖ್ಯೆ ಆಧಾರ್‌ನಲ್ಲಿ ನೋಂದಾಯಿಸಿದ್ದರೆ ಮಾತ್ರ ಅಂತಹ ಪಡಿತರ ಚೀಟಿದಾರರ ಮೊಬೈಲ್‍ಗೆ ಒ.ಟಿ.ಪಿ ಬರಲಿದೆ. ಒ.ಟಿ.ಪಿ ಯನ್ನು ನೋಂದಣಿ ಮಾಡಿಕೊಂಡು‌ ಎಫ್.ಪಿ.ಎಸ್.ಅಂಗಡಿಯವರು ಪಡಿತರದಾರರಿಗೆ ಪಡಿತರ ವಿತರಿಸಬೇಕು.

ಪಡಿತರ ಚೀಟಿದಾರರ ಮೊಬೈಲ್ ಸಂಖ್ಯೆ ಆಧಾರ್‌ನಲ್ಲಿ ನೋಂದಣಿಯಾಗದೇ ಇದ್ದ ಸಂದರ್ಭದಲ್ಲಿ ಪಡಿತರ ಚೀಟಿದಾರರು ತರುವ ಮೊಬೈಲ್ ಸಂಖ್ಯೆಯನ್ನು ವರ್ತಕರಿಗೆ ನೀಡಬೇಕು. ಆಗ ನ್ಯಾಯಬೆಲೆ ಅಂಗಡಿ ವರ್ತಕರು ಮೊಬೈಲ್‌ ಸಂಖ್ಯೆ ದೃಢೀಕರಣ ಮಾಡಿಕೊಂಡು ಅದನ್ನು ದತ್ತಾಂಶದಲ್ಲಿ ನಮೂದಿಸಿದಾಗ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನೆಯಾಗುತ್ತದೆ. ಇದನ್ನು ಬಳಸಿಕೊಂಡು ಪಡಿತರ ವಿತರಿಸಬಹುದು. ಆದರೆ ಒಂದು ಪಡಿತರ ಚೀಟಿಗೆ ನೀಡಿದ ಮೊಬೈಲ್ ಸಂಖ್ಯೆಯನ್ನು ಇನ್ನೊಂದು ಪಡಿತರ ಚೀಟಿಗೆ ನೀಡಲು ಅವಕಾಶವಿರುವುದಿಲ್ಲ.

ಇನ್ನೂ ಪಡಿತರ ಚೀಟಿದಾರರ ಕುಟುಂಬದ ಸದಸ್ಯರಲ್ಲಿ ಯಾರ ಬಳಿಯೂ ಮೊಬೈಲ್ ಇಲ್ಲದೇ ಹೋದಲ್ಲಿ ಅಂತಹ ಪ್ರಕರಣಗಳಲ್ಲಿ ಪಡಿತರ ಚೀಟಿದಾರರಿಗೆ ಈಗಾಗಲೇ ಲಭ್ಯವಿರುವ ಬಯೊಮೆಟ್ರಿಕ್ ಆಧಾರಿತವೇ ಪಡಿತರ ವಿತರಣೆ ಮಾಡಬೇಕು. ಬಯೊ ಮೆಟ್ರಿಕ್ ಆಧಾರದ ಮೇಲೆ ಪಡಿತರ ನೀಡುವ ಸಂದರ್ಭದಲ್ಲಿ ಶುಚಿತ್ವ ಕಾಪಾಡುವ ಸಂಬಂಧ ನ್ಯಾಯಬೆಲೆ ಅಂಗಡಿಗಳಲ್ಲಿ ನೀರು, ಸಾಬೂನು ಅಥವಾ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಬೇಕು. ಪಡಿತರ ಚೀಟಿದಾರರು ಬೆರಳಚ್ಚು ನೀಡುವ ಮುನ್ನ ಕೈಯನ್ನು ಶುದ್ಧವಾಗಿ ತೊಳೆದುಕೊಳ್ಳಲು ಮತ್ತು ಬಯೊಮೆಟ್ರಿಕ್ ಯಂತ್ರದ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಎಂದು ಪಡಿತರ ಅಂಗಡಿದಾರರಿಗೆ ಕಟ್ಟುನಿಟ್ಟಿನ ಸೂಚನೆ‌ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು