ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶ್ವದ ಅಭಿವೃದ್ಧಿಗೆ ರೆಡ್‌ಕ್ರಾಸ್ ಕೊಡುಗೆ ಅನನ್ಯ’

Last Updated 9 ಮೇ 2022, 2:51 IST
ಅಕ್ಷರ ಗಾತ್ರ

ಕಲಬುರಗಿ: ‘ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡುವುದು ಸೇರಿ ಹಲವು ಜನಪರ ಕಾರ್ಯಗಳನ್ನು 129ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ನಿರಂತರವಾಗಿ ಮಾಡುವ ಮೂಲಕ ರೆಡ್ ಕ್ರಾಸ್ ಸಂಸ್ಥೆ ವಿಶ್ವದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆಯನ್ನು ನೀಡುತ್ತಿದೆ‘ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅಭಿಪ್ರಾಯಪಟ್ಟರು.

ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ವಿದ್ಯಾಮಂದಿರ’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಜರುಗಿದ ‘ವಿಶ್ವ ರೆಡ್ ಕ್ರಾಸ್ ಸಂಸ್ಥೆ ದಿನಾಚರಣೆ’, ಜೆಆರ್‌ಸಿಯ ನೂತನ ಎರಡು ಘಟಕಗಳ ಉದ್ಘಾಟನೆ ಮತ್ತು ಸದಸತ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೆಡ್ ಕ್ರಾಸ್ ಸಂಸ್ಥೆ ಸದಸ್ಯ ಜಯಪ್ರಕಾಶ ಕಟ್ಟಿಮನಿ ಮಾತನಾಡಿ, ‘ಶಾಂತಿ ಕಾಪಾಡುವ, ಗಾಯಗೊಂಡ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ, ಆಕಸ್ಮಿಕ ಮರಣದ ಪ್ರಮಾಣವನ್ನು ತಗ್ಗಿಸುವ, ಸಮುದಾಯದ ಅಭಿವೃದ್ಧಿಯಲ್ಲಿ ತೊಡಗುವ ಮೂಲಕ ರೆಡ್‌ಕ್ರಾಸ್‌ ಉತ್ತಮ ಕೆಲಸ ಮಾಡುತ್ತಿದೆ’ ಎಂದರು.

ಎಚ್.ಬಿ.ಪಾಟೀಲ, ಚನ್ನಬಸಪ್ಪ ಗಾರಂಪಳ್ಳಿ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಗುರುಲಿಂಗಯ್ಯ ವಿ.ಮಠ, ಪ್ರಕಾಶ ಸರಸಂಬಿ, ಮಹಾಲಿಂಗಪ್ಪ ಮೂಲಗೆ, ಸಂಗೀತಾ ಸಿ.ಗಾರಂಪಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT