ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಧ್ವಜಾರೋಹಣ ನೆರವೇರಿಸಿದ ಸಚಿವ ನಿರಾಣಿ

Last Updated 26 ಜನವರಿ 2023, 5:12 IST
ಅಕ್ಷರ ಗಾತ್ರ

ಕಲಬುರಗಿ: ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ವಿವಿಧ ತುಕಡಿಗಳು ನೀಡಿದ ಗೌರವ ವಂದನೆಯನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ತೊಗರಿ ಬೆಳೆಗಾರರು ನೆಟೆ ರೋಗದಿಂದ ನಷ್ಟ ಅನುಭವಿಸಿದ್ದನ್ನು ಪರಿಗಣಿಸಿ ಪ್ರತಿ ಹೆಕ್ಟೇರ್ ಗೆ ₹ 10 ಸಾವಿರದಂತೆ ಗರಿಷ್ಠ ಎರಡು ಹೆಕ್ಟೇರ್ ಗೆ ಪರಿಹಾರ ನೀಡಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಒಟ್ಟು ₹ 223 ಕೋಟಿ ದೊರೆಯಲಿದೆ ಎಂದರು.

ದೇಶದ ಇತಿಹಾಸದಲ್ಲಿಯೇ ‌ಮೊದಲ ಬಾರಿಗೆ ಲಂಬಾಣಿ ತಾಂಡಾ ನಿವಾಸಿಗಳಿಗೆ 52,072 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿತರಿಸಿದ್ದಾರೆ ಎಂದರು.

ಸಂಸದ ಡಾ. ಉಮೇಶ ಜಾಧವ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಸುನೀಲ ವಲ್ಯಾಪುರೆ, ತಳವಾರ ಸಾಬಣ್ಣ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಅಧ್ಯಕ್ಷ ಅನಿರುದ್ಧ ಶ್ರವಣ್, ಐಜಿಪಿ ಅನುಪಮ್ ಅಗರವಾಲ್, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಪೊಲೀಸ್ ಕಮಿಷನರ್ ಚೇತನ್ ಆರ್. ಜಿ.ಪಂ. ಸಿಇಒ ಡಾ. ಗಿರೀಶ್ ಬದೋಲೆ, ಎಸ್ಪಿ ಇಶಾ ಪಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT