ಭಾನುವಾರ, ಮೇ 29, 2022
30 °C

ಗಣರಾಜ್ಯೋತ್ಸವ: ಕಲಬುರಗಿಯಲ್ಲಿ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: 73ನೇ ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಜಿಲ್ಲಾ ಪೊಲೀಸ್ ‌ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ ನೆರವೇರಿಸಿದರು.

ನಂತರ ವಿವಿಧ ಪೊಲೀಸ್, ಅಬಕಾರಿ, ಅಗ್ನಿಶಾಮಕ, ಗೃಹರಕ್ಷಕ ದಳ, ಅರಣ್ಯ ದಳಗಳಿಂದ ಧ್ವಜವಂದನೆ ಸ್ವೀಕರಿಸಿದರು.

ಕನ್ನಡದಲ್ಲಿ ಪರೇಡ್ ಸೂಚನೆಗಳನ್ನು ನೀಡಲಾಯಿತು.

ಸಂಸದ ಡಾ.ಉಮೇಶ ಜಾಧವ್, ಕಲ್ಯಾಣ‌ ಕರ್ನಾಟಕ ಪ್ರದೇಶ‌ ಮಂಡಳಿ ಅಧ್ಯಕ್ಷ ‌ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಬಸವರಾಜ ‌ಮತ್ತಿಮಡು, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ಮಹಿಳಾ ಅಭಿವೃದ್ಧಿ ‌ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ ಪ್ರಸಾದ್, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್, ಡಿಸಿಪಿ ಡಾ.ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು