ಸಂಗೀತ ಶಿಕ್ಷಕರ ಹುದ್ದೆ ಭರ್ತಿಗೆ ಮನವಿ

7

ಸಂಗೀತ ಶಿಕ್ಷಕರ ಹುದ್ದೆ ಭರ್ತಿಗೆ ಮನವಿ

Published:
Updated:
Prajavani

ಕಲಬುರ್ಗಿ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಸಂಗೀತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ನಿರುದ್ಯೋಗಿ ಸಂಗೀತ ಶಿಕ್ಷಕರ ಬಳಗದ ಸದಸ್ಯರು ಶಾಸಕ ಶರಣಪ್ಪ ಮಟ್ಟೂರ ಅವರಿಗೆ ಮಂಗಳವಾರ ಮನವಿಪತ್ರ ಸಲ್ಲಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈಗಾಗಲೇ ಸಂಗೀತ ಶಿಕ್ಷಕರು ಇದ್ದಾರೆ. ಪ್ರಾಥಮಿಕ ಶಾಲೆಗಳಿಗೆ 2008ರಲ್ಲಿ ಹಾಗೂ ಪ್ರೌಢಶಾಲೆಗಳಿಗೆ 2010ರಲ್ಲಿ ನೇಮಕ ಮಾಡಲಾಗಿದ್ದು, ಆ ಬಳಿಕ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಅದೇ ರೀತಿ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಏಕಲವ್ಯ ಶಾಲೆಗಳಲ್ಲಿ 2013ರ ನಂತರ ಹುದ್ದೆಗಳ ನೇಮಕಾತಿ ನಡೆದಿಲ್ಲ. ಆದ್ದರಿಂದ ಎಲ್ಲಾ ವಿಭಾಗಗಳಲ್ಲೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಶಿವಣ್ಣ ಹೂಗಾರ, ದೇಸಾಯಿ ಕಲ್ಲೂರ, ಬಾಬುರಾವ ಕೋಬಾಳ, ದತ್ತಶಾಹ ಕಲಶೆಟ್ಟಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !