ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸು ತಿರಸ್ಕರಿಸಲು ಮನವಿ

7

ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸು ತಿರಸ್ಕರಿಸಲು ಮನವಿ

Published:
Updated:
Deccan Herald

ಕಲಬುರ್ಗಿ: ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸನ್ನು ತಿರಸ್ಕರಿಸಲು ಆಗ್ರಹಿಸಿ ವೀರಶೈವ ಲಿಂಗಾಯತ ಸ್ವಾಭಿಮಾನಿಗಳ ಬಳಗದ ಸದಸ್ಯರು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ರೇಣುಕಾಚಾರ್ಯರು ಸ್ಥಾಪಿಸಿರುವ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯುವ ಹುನ್ನಾರ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಧರ್ಮವನ್ನು ಒಡೆಯಲು ಮುಂದಾಗಿರುವುದು ಖಂಡನೀಯ. ಧರ್ಮ ಒಡೆಯುವವರಿಗೆ ಈಗಾಗಲೇ ತಕ್ಕ ಪಾಠ ಕಲಿಸಲಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸನ್ನು ತಿರಸ್ಕರಿಸಬೇಕು ಮತ್ತು ಅದನ್ನು ರಾಜ್ಯ ಸರ್ಕಾರಕ್ಕೆ ವಾಪಸು ಕಳಿಸಬೇಕು ಎಂದು ಮನವಿ ಮಾಡಿದರು.

ಎಂ.ಎಸ್.ಪಾಟೀಲ ನರಿಬೋಳ ನೇತೃತ್ವ ವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !