ಶನಿವಾರ, ಮೇ 15, 2021
22 °C

ಕೋವಿಡ್‌ನಿಂದ ನಿವೃತ್ತ ಪ್ರಾಧ್ಯಾಪಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹುದ್ದೆಯಿಂದ ಮಾರ್ಚ್ 31ರಂದು ನಿವೃತ್ತಿಯಾಗಿದ್ದ ಡಾ. ರಾಜೇಂದ್ರ ಸಿಂಗ್ ಬಯಾಸ್ (60) ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ಕೆಲ ದಿನಗಳಿಂದ ಕೋವಿಡ್‌ ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಿಗ್ಗೆ ಮೃತಪಟ್ಟರು.

ಅವರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಸಿಂಗ್ ಅವರು ಸಂಗೀತಗಾರರಾಗಿ, ವಿದ್ಯಾರ್ಥಿಗಳ ನೆಚ್ಚಿನ ಪ್ರಾಧ್ಯಾಪಕರಾಗಿ ಗುರುತಿಸಿಕೊಂಡಿದ್ದರು. ತಮ್ಮ ನೆಚ್ಚಿನ ಪ್ರಾಧ್ಯಾಪಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹಲವು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳೊಂದಿಗೆ ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡು ಕಂಬನಿ ಮಿಡಿದರು.

ಅಂತ್ಯಕ್ರಿಯೆ ಕೋವಿಡ್ ನಿಯಮಗಳ ಪ್ರಕಾರ ಜೇವರ್ಗಿ ಕಾಲೊನಿಯ ಚಿತ್ತಾರಿ ರುದ್ರಭೂಮಿಯಲ್ಲಿ ಬೆಳಿಗ್ಗೆ ನೆರವೇರಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.