ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಕ್ಕೊ: ಜಿಲ್ಲಾ ಮಟ್ಟಕ್ಕೆ ರಿಬ್ಬನಪಲ್ಲಿ ಪ್ರೌಢಶಾಲೆ ಆಯ್ಕೆ

Published : 16 ಸೆಪ್ಟೆಂಬರ್ 2024, 15:32 IST
Last Updated : 16 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಸೇಡಂ: ತಾಲ್ಲೂಕಿನ ರಿಬ್ಬನಪಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕೊಕ್ಕೊ ಬಾಲಕಿಯರ ವಿಭಾಗದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಎನ್. ಶ್ರೀನಿವಾಸಲು ತಿಳಿಸಿದ್ದಾರೆ.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ದೈಹಿಕ ಶಿಕ್ಷಣ ಅಧಿಕಾರಿ ಸಂತೋಷ ಕುಲಕರ್ಣಿ, ಸಮೂಹ ಸಂಪನ್ಮೂಲ ವ್ಯಕ್ತಿ ಸಾಯಿಬಣ್ಣ ಪೂಜಾರಿ, ಶಿಕ್ಷಕರಾದ ರವೀಂದ್ರಕುಮಾರ, ರತ್ನಮ್ಮ, ರಾಜೇಂದ್ರಕುಮಾರ, ಶ್ರೀಕಾಂತ, ರೂಪಾಲಿ, ಎಸ್‌ಡಿಎಂಸಿ ಅಧ್ಯಕ್ಷ ಆಶಿರೆಡ್ಡಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT