ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಜಲಪುರ | ಕಾರು–ಬೈಕ್‌ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

Published 28 ಜನವರಿ 2024, 15:50 IST
Last Updated 28 ಜನವರಿ 2024, 15:50 IST
ಅಕ್ಷರ ಗಾತ್ರ

ಅಫಜಲಪುರ: ಪಟ್ಟಣದ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಭೀಮಾ ಕಾಲುವೆ ಬಳಿ ಭಾನುವಾರ ಮಹಾರಾಷ್ಟ್ರದ ಓವರ್ ಟೆಕ್ ಮಾಡಲು ಹೋಗಿ ಕಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಗು ಸೇರಿ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಮಹಾರಾಷ್ಟ್ರದ ಸಾತಾರಾ ನಗರದ ಅಜಿತ್ ನಾಡಗೌಡ (44), ಮಹೇಶ ದುರ್ಗಾ (27) ಎನ್ನುವವರು ಮೃತಪಟ್ಟವರು. 

ಅಜಿತ್ ಮತ್ತ ಮಹೇಶ್ ದೇವಲ ಗಾಣಗಾಪುರ ದತ್ತ ಮಹಾರಾಜರ ದರ್ಶನ ಮುಗಿಸಿಕೊಂಡು ಮರಳಿ ಹೋಗುವಾಗ ಹೋಗುತ್ತಿದ್ದರು. ಇದೇ ಸಮಯದಲ್ಲಿ ಮುಂಬೈ ನಗರದಿಂದ ದೇವಲ ಗಾಣಗಾಪುರಕ್ಕೆ ಹೊರಟಿತ್ತು. ಈ ವೇಳೆ ಘಟನೆ ನಡೆದಿದೆ.

ಭಾನುವಾರ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹವನ್ನು ನೀಡಲಾಗಿದೆ ಎಂದು ಪೊಲೀಸ್ ಠಾಣೆ ತಿಳಿಸಿದರು.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT