ಮಂಗಳವಾರ, ಆಗಸ್ಟ್ 16, 2022
30 °C

ಕಾರಿಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಅಂತಪನಾಳ ಬಳಿ ಕಾರಿಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಕಲ್ಮೂಡ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಚಿತ ರವೀಂದ್ರ ಬುಕ್ಕನ್ (15) ಹಾಗೂ ಶರಣು ದೇವಿಂದ್ರಪ್ಪ ತಂಗಾ (23)
ಮೃತ ಯುವಕರು. ಕಮಲಾಪುರಕ್ಕೆ ಅಡುಗೆ ಅನಿಲ ತರಲು ತೆರಳಿದ್ದ ಇವರು ಕಲಮೂಡ ಗ್ರಾಮಕ್ಕೆ ಮರಳುತ್ತಿದ್ದರು. ಕಲಮೂಡನಿಂದ ಕಮಲಾಪುರ ತೆರಳುತ್ತಿದ್ದ ವೇಳೆ ಬೈಕ್–ಕಾರು ಮಧ್ಯೆ ಡಿಕ್ಕಿ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು