ಚಿತ್ತಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಪಟ್ಟಣದಲ್ಲಿ ಭಾನುವಾರ ಆಯೋಜಿಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಪ್ರತಿಯಾಗಿ ಭೀಮ ಆರ್ಮಿ ಸಂಘಟನೆಯು ‘ಭೀಮ ಪಥಸಂಚಲನ’ ನಡೆಸಲು ಮುಂದಾಗಿದ್ದು, ತಾಲ್ಲೂಕು ಆಡಳಿತ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಶನಿವಾರ ತಡರಾತ್ರಿಯವರೆಗೆ ಯಾವ ಸಂಘಟನೆಗೂ ಅನುಮತಿ ಸಿಕ್ಕಿಲ್ಲ.

ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಯನ್ನು ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡರು ಪ್ರಿಯಾಂಕ್ ತವರು ಕ್ಷೇತ್ರದಲ್ಲೇ ವಿಜಯದಶಮಿ ಅಂಗವಾಗಿ ಅದ್ದೂರಿಯಾಗಿ ಪಥಸಂಚಲನ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು.

ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್ಎಸ್ಎಸ್ ಮುಖಂಡರು ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದ್ದರು. ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಥಸಂಚಲನದಲ್ಲಿ ಭಾಗವಹಿಸುವವರ ಸಂಖ್ಯೆ, ಕಾರ್ಯಕ್ರಮ ನಡೆಯಲಿರುವ ಕಲ್ಯಾಣ ಮಂಟಪದ ಮಾಲೀಕರ ಅನುಮತಿ ಪತ್ರ, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿಸ್ತೃತ ಮಾಹಿತಿ ನೀಡುವಂತೆ ಸೂಚಿಸಿದ್ದರು. ಅದರಂತೆ ಶನಿವಾರ ಸಂಜೆ ಆರ್ಎಸ್ಎಸ್ ಮುಖಂಡರು ತಹಶೀಲ್ದಾರ್ ಕೇಳಿದ್ದ ವಿವರಣೆಗಳಿಗೆ ಪೂರಕ ಮಾಹಿತಿಯನ್ನು ಸಲ್ಲಿಸಿದರು. ಬಳಿಕ ಅನುಮತಿ ನೀಡುವ ಕುರಿತು ಅಭಿಪ್ರಾಯ ನೀಡುವಂತೆ ತಹಶೀಲ್ದಾರ್ ಅವರು ಪೊಲೀಸರಿಂದ ವರದಿಯನ್ನು ಕೇಳಿದರು. ಶನಿವಾರ ರಾತ್ರಿಯವರೆಗೂ ಪೊಲೀಸರಿಂದ ತಾಲ್ಲೂಕು ಆಡಳಿತಕ್ಕೆ ವರದಿ ಬಾರದೇ ಇರುವುದರಿಂದ ಪಥಸಂಚಲನಕ್ಕೆ ಅನುಮತಿ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಭೀಮ್ ಆರ್ಮಿಯವರೂ ಚಿತ್ತಾಪುರ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣೆಯಲ್ಲಿ ಭೀಮ ಪಥಸಂಚಲನ ನಡೆಸಲು ಅನುಮತಿ ಕೋರಿ ಶನಿವಾರ ಸಂಜೆ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೂ ತಾಲ್ಲೂಕು ಆಡಳಿತ ರಾತ್ರಿಯವರೆಗೂ ಅನುಮತಿ ನೀಡಿರಲಿಲ್ಲ.

ಭಗವಾಧ್ವಜ ಬ್ಯಾನರ್ ತೆರವು

ಪಥಸಂಚಲನ ನಡೆಸಲು ಉದ್ದೇಶಿಸಿದ್ದರಿಂದ ಆರ್ಎಸ್ಎಸ್ ಕಾರ್ಯಕರ್ತರು ಚಿತ್ತಾಪುರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್ ಭಗವಾಧ್ವಜ ಮತ್ತು ಕಟೌಟ್ಗಳನ್ನು ಶನಿವಾರ ಬೆಳಗಿನ ಜಾವ ಪುರಸಭೆ ಆಡಳಿತವು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಿದೆ. ಧ್ವಜ ಬ್ಯಾನರ್ ತೆರವು ಮಾಡುತ್ತಿರುವ ವಿಷಯ ತಿಳಿಯುತ್ತಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರವೀಣ್ ಪರ ವಕಾಲತ್ತು: ತೇಜಸ್ವಿ ಸೂರ್ಯ

ಬೆಂಗಳೂರು: ‘ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಕಾರಣಕ್ಕೆ ಅಮಾನತಾಗಿರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಪರವಾಗಿ ನ್ಯಾಯಾಲಯಗಳಲ್ಲಿ ನಾನೇ ವಕಾಲತ್ತು ವಹಿಸುತ್ತೇನೆ’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ‘ಪ್ರವೀಣ್ ಜತೆ ಮಾತನಾಡಿ ಸಾಂತ್ವನ ಹೇಳಿದ್ದೇನೆ. ಸಿದ್ದರಾಮಯ್ಯ ಅವರ ಸರ್ಕಾರದ ಈ ಕಾನೂನುಬಾಹಿರ ಮತ್ತು ಅಕ್ರಮ ಅಮಾನತು ಆದೇಶವನ್ನು ಪ್ರಶ್ನಿಸಲು ಸಂಬಂಧಪಟ್ಟ ನ್ಯಾಯಮಂಡಳಿ ಮತ್ತು ನ್ಯಾಯಾಲಯಗಳಿಗೆ ನಾನೇ ಹಾಜರಾಗುತ್ತೇನೆ’ ಎಂದಿದ್ದಾರೆ. ‘ಆರ್ಎಸ್ಎಸ್ನ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗುವ ಹಕ್ಕುಗಳನ್ನು ಹೈಕೋರ್ಟ್ಗಳು ಎತ್ತಿಹಿಡಿದ ಹಲವು ಉದಾಹರಣೆಗಳಿವೆ. ಕಾಂಗ್ರೆಸ್ ಸರ್ಕಾರದ ಈ ಅಮಾನತು ಆದೇಶ ರದ್ದಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರವು ಕಾನೂನು ಹೋರಾಟವನ್ನೇ ಬಯಿಸಿದರೆ ನಾವೂ ಅದಕ್ಕೆ ಸಿದ್ಧರಿದ್ದೇವೆ’ ಎಂದು ಹೇಳಿದ್ದಾರೆ.

ನಮಾಜ್ಗೆ ಅನುಮತಿ ಪಡೆಯುವರೆ?: ರಾಜಣ್ಣ

ತುಮಕೂರು: ‘ಈದ್ಗಾ ಮೈದಾನ ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ’ ಎಂದು ಶಾಸಕ ಕೆ.ಎನ್.ರಾಜಣ್ಣ ಶನಿವಾರ ಪ್ರಶ್ನಿಸಿದರು. ‘ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದರೆ ತಡೆಯುವ ಶಕ್ತಿ ಇದೆಯೇ? ಅನುಮತಿ ಕೊಡಿ ಎಂದು ಅವರು ಬರುತ್ತಾರೆಯೇ? ಅನುಮತಿ ತೆಗೆದುಕೊಳ್ಳಿ ಎಂದು ನಾವು ಹೇಳುತ್ತೇವೆಯೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಕೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಜಾರಿ ಮಾಡಲು ಸಾಧ್ಯವಾಗುವ ಕಾನೂನು ಮಾಡಬೇಕು. ಜಾರಿ ಮಾಡಲಾಗದ ಕಾನೂನು ತಂದರೆ ಅದು ಪುಸ್ತಕದಲ್ಲಿ ಇರುತ್ತದೆ. ಹೊಸ ನಿಯಮ ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದರು.

ಮೆರವಣಿಗೆಗೆ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಂಘ–ಸಂಸ್ಥೆಗಳು ನಾಗರಿಕ ಗುಂಪುಗಳು ಖಾಸಗಿ ವ್ಯಕ್ತಿಗಳು ಕಾರ್ಯಕ್ರಮ ಆಯೋಜಿಸುವುದಕ್ಕೂ ಮುನ್ನ ಪೊಲೀಸ್ ಕಮಿಷನರ್ ಅಥವಾ ಎಸ್ಪಿ ಅವರಿಂದ ಪೂರ್ವಾನುಮತಿ ಪಡೆಯಬೇಕು ಎಂದು ಗೃಹ ಇಲಾಖೆಯು ಶನಿವಾರ ಆದೇಶಿಸಿದೆ. ತಕ್ಷಣದಿಂದಲೇ ಈ ಆದೇಶ ಜಾರಿಯಾಗಲಿದೆ ಎಂದು ತಿಳಿಸಿದೆ. ಸರ್ಕಾರಿ–ಅನುದಾನಿತ ಶಾಲಾ–ಕಾಲೇಜುಗಳು ಸರ್ಕಾರಿ ವಿಶ್ವವಿದ್ಯಾಲಯಗಳು ಸರ್ಕಾರಿ ಕಚೇರಿ ಮತ್ತು ನಿಗಮ ಮಂಡಳಿಗಳ ಆವರಣಗಳು ಮೈದಾನ ಉದ್ಯಾನಗಳು ಮತ್ತು ಸಾರ್ವಜನಿಕ ರಸ್ತೆಗಳಲ್ಲಿ ಆಯೋಜಿಸಲು ಇಚ್ಛಿಸುವ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳಿಗೆ ಇದು ಅನ್ವಯವಾಗುತ್ತದೆ. ಈ ಆದೇಶವನ್ನು ಉಲ್ಲಂಘಿಸಿ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಆಯೋಜಿಸಿರುವವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.