ಕಲಬುರಗಿ: ‘ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಡೆಸುವ ಚಟುವಟಿಕೆಗಳಿಗೂ ನಿಷೇಧ ಹೇರಬೇಕು ಎಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಫೋನ್ ಕರೆಗಳು ಬಂದಿರಬಹುದು. ಇದೇ ರೀತಿ ಮಾತು ಮುಂದುವರಿಸಿದರೆ ಆರ್ಎಸ್ಎಸ್ ಕಾರ್ಯಕರ್ತರು ಅವರ ಮನೆಗೂ ಬರಬಹುದು. ಎಚ್ಚರಿಕೆಯಿಂದ ಇದ್ದು, ಆರ್ಎಸ್ಎಸ್ಗೆ ಕ್ಷಮೆ ಕೇಳಬೇಕು’ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಆರ್ಎಸ್ಎಸ್ ಒಂದು ದೇಶ ಭಕ್ತಿಯ ಕಟ್ಟರ್ ಸಂಘಟನೆ. ನಿಷೇಧ ಮಾಡುವ ನಿರ್ಧಾರ ಕೈಗೊಂಡರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಡುವ ಪರಿಸ್ಥಿತಿ ಬರಬಹುದು’ ಎಂದು ಹೇಳಿದರು.

‘ಆರ್ಎಸ್ಎಸ್ ಬಗ್ಗೆ ಸಚಿವರು ಮಾತನಾಡಿದಾಗ ಬಿಜೆಪಿ ರಾಜ್ಯಾಧ್ಯಕ್ಷರು ಇದರ ವಿರುದ್ಧ ಬೃಹತ್ ಪ್ರತಿಭಟನೆ ರೂಪಿಸಿ ಸಚಿವರ ಮನೆಗೆ ಮುತ್ತಿಗೆ ಹಾಕಬೇಕಿತ್ತು. ನಾನು ಅಧ್ಯಕ್ಷನಾಗಿದ್ದರೆ ಆ ಕೆಲಸವನ್ನು ಕಂಡಿತವಾಗಿಯೂ ಮಾಡುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.