ಕಲಬುರಗಿ: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಪ್ರಿಯಾಂಕ್ ಖರ್ಗೆ ಅವರ ಮನಗೆ ಮುತ್ತಿಗೆ ಹಾಕಲು ಬರುವ ಬಿಜೆಪಿಯ ಮುಖಂಡರಿಗೆ ಎಳನೀರು, ಮಜ್ಜಿಗೆ, ನೀರು ವಿತರಣೆ ವ್ಯವಸ್ಥೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ.

ನಗರದ ಐವಾನ್ ಇ ಶಾಹಿ ಅತಿಥಿ ಗೃಹ ಸಮೀಪದ ಪ್ರಿಯಾಂಕ್ ಅವರ ಮನೆಯ ಮುಂದೆ ನೀರಿನ ಬಾಟಲ್, ಎಳನೀರು, ಮಜ್ಜಿಗೆ, ಟೀ ಇರಿಸಿಕೊಂಡು ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ.

ಬಿಜೆಪಿಯು ಮುಖಂಡರು ಹಾಗೂ ಕಾರ್ಯಕರ್ತರು ಪ್ರಿಯಾಂಕ್ ಅವರಿಗೆ ಸಂಬಂಧವೇ ಇಲ್ಲದ ಪ್ರಕರಣವನ್ನು ಮುಂದಿಟ್ಟು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ. ಬಿಸಿಲಲ್ಲಿ ದಣಿದು ಬರುತ್ತಾರೆ. ಹೀಗಾಗಿ, ಅವರಿಗೆ ನೀರು, ಮಜ್ಜಿಗೆ, ಎಳನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯವಾಡಿದರು.

ಬಿಗಿ ಪೊಲೀಸ್ ಬಂದೋಬಸ್ತ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ಎನ್.ರವಿಕುಮಾರ, ಮುಖಂಡ ಪಿ.ರಾಜೀವ್ ಸೇರಿ ಹಲವರು ಭಾಗವಹಿಸುವರು. ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
.ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ಮನೆ ಮುಂದೆ ಬಿಜೆಪಿ ಪ್ರತಿಭಟನೆ.
ಜಗತ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಐವಾನ್ ಶಾಹಿ ಅತಿಥಿ ಗೃಹ ಸಮೀಪದ ಪ್ರಿಯಾಂಕ್ ಖರ್ಗೆ ಅವರ ಮನೆಗೆ ಮುತ್ತಿಗೆ ಹಾಕುವರು. ಪ್ರತಿಭಟನೆ ಸಾಗುವ ಮಾರ್ಗದ ಉದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಹಾಗೂ ಕೆಕೆಆರ್ಡಿಬಿ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದು, ನೂರಾರು ಪೊಲೀಸರು ನಿಂತಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಡಿ.ಸಿ. ಕಚೇರಿ, ಜಗತ್ ವೃತ್ತ ಸೇರಿದಂತೆ ಹಲವೆಡೆ ಪೊಲೀಸರು ನಿಯೋಜನೆಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.