ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕಲ್ ತುಳಿದ ಐಎಎಸ್‌, ಐಪಿಎಸ್ ಅಧಿಕಾರಿಗಳು!

ಕಲಬುರ್ಗಿಯಲ್ಲಿ ಸಮಕ್ಷ ಸೈಕ್ಲೋಥಾನ್‌ ರ‍್ಯಾಲಿಗೆ ಚಾಲನೆ
Last Updated 1 ಫೆಬ್ರುವರಿ 2021, 4:50 IST
ಅಕ್ಷರ ಗಾತ್ರ

ಕಲಬುರ್ಗಿ: ಸದಾ ಹವಾನಿಯಂತ್ರಿತ ಕಾರುಗಳಲ್ಲಿ ಸಂಚರಿಸುವ ಐಎಎಸ್‌ ಅಧಿಕಾರಿಗಳು ಜನರಲ್ಲಿ ಉತ್ತಮ ಆರೋಗ್ಯ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಭಾನುವಾರ ಸೈಕಲ್ ತುಳಿಯುವ ಮೂಲಕ ತಾವೇ ಮಾದರಿಯಾದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಪೊಲೀಸ್ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹಾಗೂ ಪೆಟ್ರೋಲ್ ಸಂರಕ್ಷಣಾ ಸಂಶೋಧನಾ ಸಂಸ್ಥೆಯ ಆಶ್ರಯದಲ್ಲಿ ನಡೆದ ‘ಸೈಕಲ್ ಫಾರ್ ಚೇಂಜ್’ ಯೋಜನೆಯಡಿ ಸಮಕ್ಷ ಸೈಕ್ಲೋಥಾನ್–2021ರ ರ‍್ಯಾಲಿಯಲ್ಲಿ ಮಿನಿ ವಿಧಾನಸೌಧದಿಂದ ಖರ್ಗೆ ಪೆಟ್ರೋಲ್‌ ಪಂಪ್‌ವರೆಗೆ ಐದು ಕಿ.ಮೀ. ದೂರವನ್ನು ನಿರಾಯಾಸವಾಗಿ ಕ್ರಮಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ಮಾತನಾಡಿ, ‘ಸಾರ್ವಜನಿಕರು ನಗರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕಲ್ ಬಳಸುವ ಮೂಲಕ ಅರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಬೇಕಿದೆ’ ಎಂದರು.

ಬೆಳಿಗ್ಗೆ 6.30ಕ್ಕೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಡಿ. ಕಿಶೋರಬಾಬು ಅವರು ಸೈಕಲ್ ನಡೆಸುವ ಮೂಲಕ ರ‍್ಯಾಲಿಗೆ ಚಾಲನೆ ನೀಡಿದರು. ಇದರಲ್ಲಿ ಸುಮಾರು 80ಕ್ಕೂ ಹೆಚ್ಚಿನ ಸೈಕ್ಲಿಸ್ಟ್ ಗಳು ಪಾಲ್ಗೊಂಡಿದರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ ನಾಯಕ್, ಇಂಡಿಯನ್ ಆಯಿಲ್ ಡಿಪೊ ಮ್ಯಾನೇಜರ್ ನಿತಿನ್ ಗೇರ್ತಿ, ಸಹಾಯಕ ವ್ಯವಸ್ಥಾಪಕ ಮಹೇಶ ಶೆಲಕೆ, ವಿವಿಧ ಇಲಾಖೆಗಳ ಎಂಜಿನಿಯರುಗಳು, ಸಹಾಯಕ ಎಂಜಿನಿಯರುಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT