ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಮಾಫಿಯಾಗೆ ಕಡಿವಾಣ ಹಾಕಿ: ಸಚಿವ ಕಾರಜೋಳ ಸೂಚನೆ

Last Updated 12 ಡಿಸೆಂಬರ್ 2019, 11:34 IST
ಅಕ್ಷರ ಗಾತ್ರ

ಕಲಬುರ್ಗಿ: ‘ಜಿಲ್ಲೆಯಲ್ಲಿ‌ ಮರಳು ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ’ ಎಂಬ ಶಾಸಕರ‌‌ ಅಪಾದನೆಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ‘ಮಾಫಿಯಾಗೆ ಕಡಿವಾಣ ಹಾಕಬೇಕು’ ಎಂದು ಜಿಲ್ಲಾಧಿಕಾರಿ ಶರತ್ ಅವರಿಗೆಖಡಕ್ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ)ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಕ್ರಮ‌ ಮರಳು ಸಾಗಾಣಿಕೆ ಪ್ರಕರಣದಲ್ಲಿ ಜಪ್ತಿ ಮಾಡಿ ಸಂಗ್ರಹಿಸಿದ ಮರಳು ಕಾವಲಿಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದ ಉಪಮುಖ್ಯಮಂತ್ರಿ ಸಾರ್ವಜನಿಕರಿಗೆ ಮರಳು ದೊರಕುವಂತೆ ಕ್ರಮಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ತಮ್ಮ ಕ್ಷೇತ್ರವು ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಅಕ್ರಮ ಮರಳು ಸಾಗಾಟವಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕು’ ಎಂದರು. ಇದಕ್ಕೆ‌ ಶಾಸಕರಾದ ಎಂ.ವೈ.ಪಾಟೀಲ,‌ ರಾಜಕುಮಾರ ಪಾಟೀಲ ತೇಲ್ಕೂರ ಧ್ವನಿಗೂಡಿಸಿದರು.

ಜಿಲ್ಲಾಧಿಕಾರಿ ಶರತ್, ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮರಳು ಪಡೆಯಲು 14 ಮರಳು ಬ್ಲಾಕ್ ಗಳಿಗೆ ಈಗಾಗಲೇ ಇ-ಟೆಂಡರ್ ಆಗಿದೆ. ಆದರೆ ಹೆಚ್ಚಿನ ದರಕ್ಕೆ ಬಿಡ್ ಮಾಡಿದ್ದರಿಂದ ಆ ದರಕ್ಕೆ ಮರಳು ಖರೀದಿಸಲು ಆಸಕ್ತಿ ತೋರಿಸುತ್ತಿಲ್ಲ’ ಎಂದರು‌.

‘ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ರೇಣುಕಾದೇವಿ ಮಾತನಾಡಿ ಕಳೆದ ಏಪ್ರಿಲ್ ನಿಂದ ಇಲ್ಲಿಯವರೆಗೆ ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ 130 ಪ್ರಕರಣ ದಾಖಲಿಸಿ‌ ಅಗತ್ಯ ಕ್ರಮ ವಹಿಸಲಾಗಿದೆ’ ಎಂದು ಸಭೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT