ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ: ಅಕ್ರಮ ಮರಳು ದಂಧೆಕೋರರ ಅಟ್ಟಹಾಸ- ಟ್ರ್ಯಾಕ್ಟರ್ ಹರಿದು ‌ಕಾನ್‌ಸ್ಟೆಬಲ್ ಸಾವು

ನೆಲೋಗಿ ಠಾಣೆ ಕಾನ್‌ಸ್ಟೆಬಲ್ ಮಯೂರ ಚವ್ಹಾಣ ಮರಣ
Published 16 ಜೂನ್ 2023, 7:23 IST
Last Updated 16 ಜೂನ್ 2023, 7:23 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದ ಬಳಿ ಭೀಮಾ ನದಿಯಿಂದ ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಡ್ಡಗಟ್ಟಲು ಮುಂದಾದ ನೆಲೋಗಿ ಠಾಣೆ ಕಾನ್‌ಸ್ಟೆಬಲ್ ಮಯೂರ ಚವ್ಹಾಣ (51) ಮೇಲೆ ಟ್ರ್ಯಾಕ್ಟರ್ ಹಾಯ್ದು ಅವರು ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಎಸ್ಪಿ ಇಶಾ ಪಂತ್ ಅವರು ಆರೋಪಿಗಳ ಪತ್ತೆಗೆ ತನಿಖಾ ತಂಡ ರಚಿಸಿದ್ದರು.

ಮರಳು ಅಕ್ರಮ ಸಾಗಾಟ ಮಾಡುತ್ತಿದ್ದುದನ್ನು ತಡೆಯಲು ಹೋದ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹಾಯಿಸಿ ಕೊಲೆ‌ ಮಾಡಿದ್ದ ಆರೋಪದ ಮೇಲೆ ಟ್ರ್ಯಾಕ್ಟರ್ ಚಾಲಕ ನಾರಾಯಣಪುರದ ಸಿದ್ದಪ್ಪ ಕರ್ಜಗಿ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‌ಅಕ್ರಮ ಮರಳು ತಡೆಗೆ ಹುಲ್ಲೂರು ಗ್ರಾಮದ ಬಳಿ ಚೆಕ್ ಪೋಸ್ಟ್ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಟ್ರ್ಯಾಕ್ಟರ್ ತಪಾಸಣೆ ಮಾಡಲು ಮುಂದಾದಾಗ ಚಾಲಕ ಮಯೂರ ಮೇಲೆ ಹಾಯಿಸಿಕೊಂಡು ಪರಾರಿಯಾಗಿದ್ದ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಘಟನೆಯ ಮಾಹಿತಿ ಪಡೆದಿದ್ದಾರೆ. ಕುಟುಂಬದವರಿಗೆ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು, ತನಿಖೆಗೆ ಆದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT