ಶನಿವಾರ, ಅಕ್ಟೋಬರ್ 1, 2022
25 °C

ಕೆಬಿಎನ್ ವಿ.ವಿ.ಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಭಾರತದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೆಬಿಎನ್ ವಿ.ವಿ.ಯ ವಿಶ್ರಾಂತ ಕುಲಪತಿ ಮತ್ತು ಕೆಇಎಸ್‌ನ ಪ್ರಧಾನ ಕಾರ್ಯದರ್ಶಿ ಪ್ರೊ.ಎ.ಎಚ್. ಪಠಾಣ್ ಚಾಲನೆ ನೀಡಿದರು.

ಕೆಬಿಎನ್ ಹಾಲಿ ಕುಲಪತಿ ಪ್ರೊ.ಅಲಿ ರಜಾ ಮೌಸ್ವಿ, ಕುಲಸಚಿವೆ ಡಾ. ರುಕ್ಸರ್ ಫಾತಿಮಾ ಹಾಗೂ ಖಾಜಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಗೇಸುದರಾಜ್ ಖಾದರಿ ಹಾಜರಿದ್ದರು. ಒಟ್ಟು 75 ಸಸಿಗಳನ್ನು ನೆಡಲಾಯಿತು.

ಕೆಬಿನ್ ವಿ.ವಿ.ಯ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು