ಭಾನುವಾರ, ಮೇ 9, 2021
28 °C

ಕಲಬುರ್ಗಿ: ಶರಣಬಸವೇಶ್ವರ ಸಂಸ್ಥಾನದ ಬಸವರಾಜಪ್ಪ ಅಪ್ಪ ‌ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಶರಣಬಸವೇಶ್ವರ ದಾಸೋಹ ‌ಮಹಾಸಂಸ್ಥಾನದ ಪೀಠಾಧಿಪತಿಯಾಗಿದ್ದ ದಿ.ದೊಡ್ಡಪ್ಪ ಅಪ್ಪ ಅವರ ಎರಡನೇ ಪುತ್ರ ಬಸವರಾಜಪ್ಪ ‌ಅಪ್ಪ (80) ಅವರು  ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಇದೇ 17ರಂದು ಅವರ ಪತ್ನಿ ನಳಿನಿದೇವಿ ಅವರು ಇಹಲೋಕ ತ್ಯಜಿಸಿದ್ದರು.

ಅವರಿಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಗೌರವ ಅಧ್ಯಕ್ಷ ಹಾಗೂ ಸಮಾಜ ಸೇವಕ ಲಿಂಗರಾಜಪ್ಪ ಅಪ್ಪ ಸೇರಿದಂತೆ ಇಬ್ಬರು ಪುತ್ರರು, ಐವರು ಪುತ್ರಿಯರು ಇದ್ದಾರೆ.

ಹಲವು ಕಾಲದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದರು.

ಬಸವರಾಜಪ್ಪ ಅವರು ಪ್ರಸ್ತುತ ಪೀಠಾಧಿಪತಿಯಾಗಿರುವ ಡಾ.ಶರಣಬಸವಪ್ಪ ಅಪ್ಪ ಅವರ ಕಿರಿಯ ಸಹೋದರ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು