ಮಂಗಳವಾರ, ಜನವರಿ 25, 2022
28 °C

‘ಶಿಕ್ಷಣ, ಸಮಾನತೆಯ ಸ್ಫೂರ್ತಿ ಸಾವಿತ್ರಿಬಾಯಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ಸಾವಿತ್ರಿಬಾಯಿ ಫುಲೆ ಅವರು ಆಧುನಿಕ ಭಾರತದ ಮೊದಲ ಶಿಕ್ಷಕಿ. ಜಾತಿ, ಧರ್ಮ, ವರ್ಗ, ಭೇದ ಮಾಡದೇ ಸಮಾನ ಅಕ್ಷರದೂಟ ಉಣಬಡಿಸಿದ ಆದರ್ಶಮಯಿ. ಅವರ ಜೀವನಗಾಥೆ ಇಂದಿನ ಶಿಕ್ಷಕರಿಗೆ ಸ್ಫೂರ್ತಿ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಪರಿಷತ್ತಿನ ವತಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಇಂದು ಮಹಿಳೆಗೆ ಪುರುಷರಷ್ಟೇ ಸಮಾನ ಅವಕಾಶಗಳು ದೊರೆಯುತ್ತಿವೆ. ಇದಕ್ಕೆ ಕಾರಣ ಅಂದು ಶಿಕ್ಷಣ, ಸಮಾನತೆಯ ಹಕ್ಕಿಗೆ ಕ್ರಾಂತಿಕಾರಿ ಹೆಜ್ಜೆ ಇಟ್ಟ ಸಾವಿತ್ರಿಬಾಯಿ’ ಎಂದರು.

ಸಿದ್ಧಾರ್ಥ ಬುದ್ಧವಿಹಾರದ ಸಂಘಾನಂದ ಬಂತೇಜಿ ಸಾನ್ನಿಧ್ಯ ವಹಿಸಿದ್ದರು. ಕಸಾಪ ಜಿಲ್ಲಾ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಶರಣರಾಜ್ ಛಪ್ಪರಬಂದಿ, ಯಶವಂತರಾಯ ಅಷ್ಟಗಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಎಸ್. ಪಾಟೀಲ, ಗುಲಬರ್ಗಾ ವಿ.ವಿ ವಿಶ್ರಾಂತ ಕುಲಸಚಿವ ಆರ್.ಎಸ್. ದೊಡ್ಮನಿ, ಲೇಖಕಿ ಶಕುಂತಲಾ ಪಾಟೀಲ ಜಾವಳಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾ ರವಿ ರಾಠೋಡ, ಬಿಜೆಪಿ ಉತ್ತರ ವಲಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಪಾಟೀಲ ಸೇರದಂತೆ ಹಲವು ಶಿಕ್ಷಕರೂ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.