ಭಾನುವಾರ, ಡಿಸೆಂಬರ್ 4, 2022
19 °C

ಎಸ್‌ಬಿಐ ಗೃಹ, ಕಾರು ಸಾಲ ಮೇಳ; ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ ಆಯೋಜಿಸಿರುವ ಎರಡು ದಿನಗಳ ಗೃಹ ಹಾಗೂ ಸಾಲ ಮೇಳಕ್ಕೆ ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಕೆ.ಬಿ. ಪಾಟೀಲ ಅವರು ನಗರದ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಪಾಟೀಲ, ‘ಕಲಬುರಗಿಯ ನಾಗರಿಕರು ಸಾಲ ಮೇಳದ ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್ ಅಧಿಕಾರಿಗಳು, ‘ದಾಖಲೆಗಳು ಸರಿ ಇದ್ದರೆ ಶೀಘ್ರವೇ ಸಾಲವನ್ನು ಮಂಜೂರು ಮಾಡಲಾಗುವುದು. ಸಾಲದ ತುರ್ತು ವಿತರಣೆಗಾಗಿ ಪ್ರತ್ಯೇಕ ತಂಡವನ್ನೇ ನಿಯೋಜಿಸಲಾಗಿದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಚೌಗಲೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಯಾನಂದ ಪಾಟೀಲ, ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಲ್‌. ಶ್ರೀನಿವಾಸರಾವ್, ಪ್ರಾದೇಶಿಕ ವ್ಯವಸ್ಥಾಪಕಿ ಸುಮಾ ಎಚ್‌.ಎಸ್, ಎಜಿಎಂಗಳಾದ ವಿಕ್ರಂ ಪಿ, ವಿಜಯೇಂದ್ರ, ಗಿರೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು