ಜಿಲ್ಲಾ ಮಟ್ಟದ ಕ್ರೀಡಾಕೂಟ: ಎಸ್‌ಬಿಆರ್ ರಾಜ್ಯಮಟ್ಟಕ್ಕೆ ಆಯ್ಕೆ

7

ಜಿಲ್ಲಾ ಮಟ್ಟದ ಕ್ರೀಡಾಕೂಟ: ಎಸ್‌ಬಿಆರ್ ರಾಜ್ಯಮಟ್ಟಕ್ಕೆ ಆಯ್ಕೆ

Published:
Updated:
Deccan Herald

ಕಲಬುರ್ಗಿ: ನಗರದಲ್ಲಿ ಈಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ‘ಸಮಗ್ರ ಪ್ರಶಸ್ತಿ’ಗೆ ಭಾಜನರಾಗಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗ: ಫುಟ್ಬಾಲ್, ಬ್ಯಾಸ್ಕೆಟ್ ಬಾಲ್, ಶೆಟಲ್ ಬ್ಯಾಡ್ಮಿಂಟನ್, ಕರಾಟೆ ಮತ್ತು ಚೆಸ್‌ನಲ್ಲಿ ಪ್ರಥಮ ಹಾಗೂ ಥ್ರೊ ಬಾಲ್‌ನಲ್ಲಿ ದ್ವಿತೀಯ ಸ್ಥಾನ.

ಬಾಲಕಿಯರ ವಿಭಾಗ: ಹ್ಯಾಂಡ್ ಬಾಲ್, ಥ್ರೊ ಬಾಲ್, ಬ್ಯಾಸ್ಕೆಟ್ ಬಾಲ್, ಯೋಗಾಸನದಲ್ಲಿ ಪ್ರಥಮ ಹಾಗೂ ಶೆಟಲ್ ಬ್ಯಾಡ್ಮಿಂಟನ್, ಚೆಸ್‌ನಲ್ಲಿ ದ್ವಿತೀಯ ಸ್ಥಾನ.

ಅಥ್ಲೆಟಿಕ್ಸ್‌ನಲ್ಲಿ ಕವಿರಾಜ ಎಲ್.ಕೋಣಿನ್ (ಶಾಟ್‌ಪಟ್‌, ಡಿಸ್ಕಸ್‌ ಮತ್ತು ಹ್ಯಾಮರ್ ಥ್ರೊ–ಪ್ರಥಮ), ಸೌಂದರ್ಯ ಡಿ.ಡಿ. (ಶಾಟ್‌ಪಟ್‌, ಡಿಸ್ಕಸ್‌ ಥ್ರೊ–ಪ್ರಥಮ) ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ, ಕಾಲೇಜಿನ ಪ್ರಾಚಾರ್ಯ ಎನ್.ಎಸ್.ದೇವರಕಲ್, ಕಾಲೇಜಿನ ಮೇಲ್ವಿಚಾರಕ ಶ್ರೀಶೈಲ್ ಹೊಗಾಡೆ, ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ ಗುತ್ತೇದಾರ ಅಭಿನಂದನೆ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !