ಕಲಬುರಗಿ: ಸಿಪಿಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಬೆರಳಚ್ಚು ವಿಭಾಗದಲ್ಲಿ ಸಿಪಿಐ ಆಗಿದ್ದ ಆನಂದ ಮೇತ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್ ನ್ಯಾಯಾಲಯವು ಶನಿವಾರ ತಿರಸ್ಕರಿಸಿದೆ.

ಪ್ರಕರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ ಜೊತೆ ನಿಕಟ ಸಂಬಂಧ ಹೊಂದಿದ್ದ ಮೇತ್ರಿ ಪರೀಕ್ಷಾ ಕೇಂದ್ರಗಳಿಗೆ ಉತ್ತರ ಪತ್ರಿಕೆಗಳನ್ನು ಪೂರೈಸುವ ಕೆಲಸ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದ್ದರಿಂದ ಅವರನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿ ಪಡೆದಿದ್ದರು.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ ನೇಸರಗಿ ಅವರು ಪ್ರಕರಣದಲ್ಲಿ 27ನೇ ಆರೋಪಿಯಾಗಿರುವ ಆನಂದ ಮೇತ್ರಿ ಅರ್ಜಿಯನ್ನು ತಿರಸ್ಕರಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಯಾವ ಆರೋಪಿಗಳಿಗೂ ಇಲ್ಲಿಯವರೆಗೆ ಜಾಮೀನು ಸಿಕ್ಕಿಲ್ಲ.

ಸಿಐಡಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.