ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌: ₹ 5 ಕೋಟಿ ವಿದ್ಯಾರ್ಥಿ ವೇತನ

ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಡಾ.ಖದೀರ್ ಹೇಳಿಕೆ
Last Updated 24 ಅಕ್ಟೋಬರ್ 2020, 16:32 IST
ಅಕ್ಷರ ಗಾತ್ರ

ಕಲಬುರ್ಗಿ: ‘ಪ್ರಸಕ್ತ ವರ್ಷದ ನೀಟ್ ದೀರ್ಘಕಾಲದ ರಿಪಿಟರ್ ತರಬೇತಿ ಹಾಗೂ ಇತರ ಕೋರ್ಸ್‍ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗಾಗಿ ಒಟ್ಟಾರೆ ₹ 5 ಕೋಟಿ ವಿದ್ಯಾರ್ಥಿ ವೇತನ ನೀಡಲು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ನಿರ್ಧರಿಸಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದರು.

‘ಕೊರೊನಾ ಹಾವಳಿ ಹಾಗೂ ಅತಿವೃಷ್ಟಿಯಿಂದ ಅನೇಕ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನೀಟ್‍ನಲ್ಲಿ ರಾಷ್ಟ್ರಮಟ್ಟದಲ್ಲಿ 9ನೇ ರ‍್ಯಾಂಕ್‌ ಗಳಿಸಿದ ಸಂಭ್ರಮದಲ್ಲಿರುವ ಸಂಸ್ಥೆಯು ವಿದ್ಯಾರ್ಥಿ ವೇತನದ ಮೂಲಕ ಸುಮಾರು 3 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಮುಂದಾಗಿದೆ. ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ನೀಟ್ ದೀರ್ಘ ಕಾಲದ ರಿಪಿಟರ್‍ಗಳಿಗೆ ನೀಟ್‍ನಲ್ಲಿ ಪಡೆದ ಅಂಕಗಳನ್ನು ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರ್ ಶಾಖೆಗೆ ಮಾತ್ರ ಅನ್ವಯಿಸುವಂತೆ ಪದವಿಪೂರ್ವ ಕಲಾ, ವಾಣಿಜ್ಯ, ಬಿಎ., ಬಿಎಸ್ಸಿ, ಬಿ.ಕಾಂ ಪ್ರವೇಶ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಕೊಡಲಾಗುವುದು. ಕೊರೊನಾದಿಂದಾಗಿ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಸಂಪೂರ್ಣ ಉಚಿತ ನೀಡಲು ಉದ್ದೇಶಿಸಲಾಗಿದೆ’ ಎಂದೂ ಅವರು ತಿಳಿಸಿದರು.

ಸಂಸ್ಥೆಯ ವೆಬ್‌ಸೈಟ್‌ www.haheengroup.org ಇದರಲ್ಲಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬೇಕು. ಅಗತ್ಯವಿದ್ದ ಪ್ರತಿಯೊಬ್ಬರೂ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. ನೀಟ್ ರಿಪಿಟರ್ ತರಬೇತಿ ಪ್ರವೇಶಕ್ಕೆ ನವೆಂಬರ್ 1 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಟೊಲ್ ಫ್ರೀ ಸಂಖ್ಯೆ 18001216235 ಮೂಲಕ ಸಂಪರ್ಕಿಸಬಹುದು ಎಂದು ಖದಿರ್‌ ಹೇಳಿದರು.

ಅಕಾಡೆಮಿ ನಿರ್ದೇಶಕಿ ಡಾ.ಖಮರ್ ಸುಲ್ತಾನ, ನೀಟ್‌ನಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿ ಅರ್ಬಾಜ್, ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ವೈಜನಾಥ, ಮಹ್ಮದ್ ಯುನೂಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT