ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕಾಲರ್‌ಶಿಪ್‌ ಅರ್ಜಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ನರ್ಸಿಂಗ್ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Last Updated 17 ಮಾರ್ಚ್ 2021, 2:56 IST
ಅಕ್ಷರ ಗಾತ್ರ

ಕಲಬುರ್ಗಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಹಾಗೂ ಇತರೆ ಹಿಂದುಳಿದ ವರ್ಗಗಳ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ನರ್ಸಿಂಗ್ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್‌ ನೇತೃತ್ವದಲ್ಲಿ ನೂರಾರು ನರ್ಸಿಂಗ್ ವಿದ್ಯಾರ್ಥಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಲ್ಲ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‌ಶಿಪ್ ‍ಪೋರ್ಟಲ್ (ಎಸ್‌ಎಸ್‌ಪಿ) ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಅಥವಾ ನರ್ಸಿಂಗ್ ಮಂಡಳಿಯ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಬೇಕಾಗುತ್ತದೆ. ಆದರೆ, ಇನ್ನೂ ಹಲವು ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆ ಬಂದಿಲ್ಲ. 2019ರ ಸೆಪ್ಟೆಂಬರ್‌ನಲ್ಲಿ ಪ್ರವೇಶ ಪಡೆದರೂ ಪರೀಕ್ಷೆಯಲ್ಲಿನ ವಿಳಂಬದಿಂದಾಗಿ ಆ ವಿದ್ಯಾರ್ಥಿಗಳಿಗೂ ಸಂಖ್ಯೆ ಸಿಕ್ಕಿಲ್ಲ. ಈ ಕಾರಣಕ್ಕಾಗಿ ಹಲವು ಜನರು ಸ್ಕಾಲರ್‌ಶಿಪ್‌ನಿಂದ ವಂಚಿತರಾಗುತ್ತಿದ್ದು, ನೋಂದಣಿ ಸಂಖ್ಯೆ ದಾಖಲಿಸುವುದನ್ನು ಕಡ್ಡಾಯ ಮಾಡಬಾರದು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT