ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಲಾ ಸೌಲಭ್ಯಗಳಿಗೆ ಮೊದಲ ಆದ್ಯತೆ’

Published 19 ಮಾರ್ಚ್ 2024, 4:49 IST
Last Updated 19 ಮಾರ್ಚ್ 2024, 4:49 IST
ಅಕ್ಷರ ಗಾತ್ರ

ಅಫಜಲಪುರ: ‘ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಶಾಲಾ-ಕಾಲೇಜುಗಳಿಗೆ ಹಂತ ಹಂತವಾಗಿ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು, ಯಾವುದೇ ಕಾರಣಕ್ಕೂ ಶೈಕ್ಷಣಿಕ ಕಾರ್ಯಗಳಿಗೆ ಅನುದಾನ ಕಡಿಮೆ ಮಾಡುವುದಿಲ್ಲ’ ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ತಾಲ್ಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ಮತಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿಯೂ ಪ್ರಾಥಮಿಕ ಶಾಲಾ ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಅವಶ್ಯಕತೆ ಇದ್ದಲ್ಲಿ ಹೆಚ್ಚಿನ ಶಾಲಾ ಕೋಣೆಗಳನ್ನು ನಿರ್ಮಾಣ ಮಾಡಲಾಗುವುದು. ಶಾಲಾ ಮಕ್ಕಳ ಬೇಡಿಕೆಯಂತೆ ಗಣಕಯಂತ್ರಗಳನ್ನು ನೀಡಲಾಗುವುದು. ಶಾಲೆಗೆ ಶುದ್ಧ ಕುಡಿಯುವ ನೀರು, ಕಾಂಪೌಂಡ್‌ ಮಾಡಿಕೊಡಲಾಗುವುದು. ಪ್ರಾಥಮಿಕ ಶಾಲಾ ಹಂತ ಗುಣಮಟ್ಟವಾಗಿದ್ದರೆ ಮಕ್ಕಳು ಹೆಚ್ಚಿನ ರೀತಿಯಲ್ಲಿ ಅಭ್ಯಾಸ ಮಾಡಲು ಅನುಕೂಲವಾಗುತ್ತದೆ. ಅದಕ್ಕಾಗಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸಾಕಷ್ಟು ಅನುದಾನವನ್ನು ಶಾಲಾ ಕಾಲೇಜುಗಳ ಮೂಲ ಸೌಲಭ್ಯಗಳಿಗೆ ಬಳಸಲಾಗುತ್ತಿದೆ. ಎಲ್ಲಾ ಕಾರ್ಯಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ. ಶಿಕ್ಷಕರು ಸಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಸರ್ಕಾರ ಶಿಕ್ಷಣಕ್ಕಾಗಿ ನೀಡುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ಮಕ್ಕಳು ಬಳಸಿಕೊಂಡು ಅಭ್ಯಾಸ ಮಾಡಬೇಕು’ ಎಂದು ಅವರು ತಿಳಿಸಿದರು.

ಹೊಸದಾಗಿ ನಿರ್ಮಾಣವಾದ ಶಾಲಾ ಕೊಠಡಿಗಳನ್ನು ಪರಿಶೀಲಿಸಿದರು. ಗ್ರಾ.ಪಂ.ಅಧ್ಯಕ್ಷರಾದ ಲಕ್ಷ್ಮಿ ಜಮಾದಾರ, ಭೀಮಶಾ ದೊಡ್ಡಮನಿ, ಸುರೇಶ್ ಜಮಾದಾರ, ಸಿದ್ದು ಜಮಾದಾರ, ಸಂತೋಷ್ ರಂಡಾಳೆ, ಶ್ರೀಶೈಲ್ ಚಿನ್ಮಳ್ಳಿ, ಶಾಲಾ ಸುಧಾರಣಾ ಸಮಿತಿ ಮುಖಂಡ ಲಕ್ಕಪ್ಪ ಮ್ಯಾಕೇರಿ, ಯಲ್ಲಾಲಿಂಗ ಜಮಾದಾರ, ಮೆಹಬೂಬ್ ಹಾಗೂ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಲಕ್ಷ್ಮಿಕಾಂತ್ ಬಿರಾದಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಕಾಶ್ ಜಮಾದಾರ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ, ತಹಶೀಲ್ದಾರ್‌ ಸಂಜುಕುಮಾರ್ ದಾಸರ್, ಮುಖ್ಯಶಿಕ್ಷಕ ಅರ್ಜುನ್, ಸಹಶಿಕ್ಷಕರಾದ ಶಂಭುಲಿಂಗ ಜಗದಿ, ಗುರುಲಿಂಗ ಪ್ರಧಾನಿ, ಸಂಜು ಬಗಲಿ, ಸಾಕಮ್ಮ ಹಳೆ, ಕುಸುಮಾ ಪಾಟೀಲ್, ವಿಜಯಲಕ್ಷ್ಮಿ ಮನಮಿ, ಮಹಾದೇವಿ ದೇಸಾಯಿ ಮತ್ತಿತರರು ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT