ವಾಡಿ: ಬಂಜಾರಾ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಅನುಕೂಲಕರವಾಗಿದ್ದ ಚಿತ್ತಾಪುರ ತಾಲ್ಲೂಕಿನ ಹಣ್ಣಿಕೇರಾ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಹಣ್ಣಿಕೇರಾ ಶಾಲೆಗೆ ವಿಲೀನ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯ ಪೋಷಕರು ಶನಿವಾರ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ ಒ) ನೇತೃತ್ವದಲ್ಲಿ ಹಣ್ಣಿಕೇರಾ ತಾಂಡಾದ ಶಾಲೆಯ ಮುಂದೆಯೇ ಪ್ರತಿಭಟನಾ ಸಭೆ ನಡೆಸಿದ ತಾಂಡಾ ನಿವಾಸಿಗಳು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಜಂಟಿ ಕಾರ್ಯದರ್ಶಿ ಯುವರಾಜ್ ರಾಠೋಡ, ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯದ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಅತ್ಯಂತ ಜನ ವಿರೋಧಿ ನೀತಿಯಾಗಿದೆ. ಈ ಯೋಜನೆ ಜಾರಿಯಿಂದ ತಾಂಡಾದ ಶಾಲೆ ಮುಚ್ಚಳಿದ್ದು ಬಡ ಮಕ್ಕಳು ಶಿಕ್ಷಣದ ಗತಿಯೇನು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಹಣ್ಣಿಕೇರಾ ಶಾಲೆಗೆ ವಿಲೀನ ಮಾಡಲಾಗುತ್ತಿದ್ದು ಜನರ ಜತೆ ಎ ಐ ಡಿ ಎಸ್ ಓ ವಿದ್ಯಾರ್ಥಿ ಸಂಘಟನೆ ಬಲವಾಗಿ ನಿಂತು ಹೋರಾಟ ಕಟ್ಟುತ್ತಿದೆ ಎಂದರು. ಅತೀ ಹೆಚ್ಚು ದಾಖಲಾತಿ ಹೊಂದಿರುವ ತಾಂಡಾ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡ ರೈತ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಮುಖಂಡ ಸಿದ್ದಾರ್ಥ ತಿಪ್ಪನೂರ ಮಾತನಾಡಿ, ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರ, ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್ ಡಿ ಎಂ ಸಿ ತಲೆಗೆ ಕಟ್ಟುವ ಹುನ್ನಾರ ನಡೆಸುತ್ತಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆಗೆ ಕೊಟ್ಟು ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ಶಿಕ್ಷಣದಿಂದ ದೂರ ತಳ್ಳುವ ಹುನ್ನಾರ ಇದಾಗಿದೆ. ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಶಾಲೆಗಳಿಗೆ ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದ್ದು ಹೋರಾಟಕ್ಕೆ ಸಾರ್ವಜನಿಕರು ಸಜ್ಜಾಗಬೇಕು ಎಂದು ಕರೆ ನೀಡಿದರು.

ತಾಂಡಾದ ಸುಭಾಸ್ಚಂದ್ರ ನಾಯಕ್, ಶಾಮ್ ಹಾಗೂ ಇನ್ನಿತರರು. ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.