ಇಂದಿನಿಂದಲೇ ಶಾಲೆಗಳು ಆರಂಭ

ಗುರುವಾರ , ಜೂನ್ 27, 2019
30 °C

ಇಂದಿನಿಂದಲೇ ಶಾಲೆಗಳು ಆರಂಭ

Published:
Updated:
Prajavani

ಕಲಬುರ್ಗಿ: ಜಿಲ್ಲೆಯಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರಢಶಾಲೆಗಳು ಸೋಮವಾರ (ಜೂನ್‌ 10)ದಿಂದಲೇ ಪ್ರಾರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ತಿಳಿಸಿದ್ದಾರೆ.

ಬಿಸಿಲಿನ ತಾಪ ಹೆಚ್ಚಿದ್ದ ಕಾರಣ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೂಡ ಶಾಲಾ ಪ್ರಾರಂಭೋತ್ಸವವನ್ನು ಮೇ 29ರ ಬದಲಾಗಿ ಜೂನ್‌ 14ರವರೆಗೆ ಮುಂದೂಡಲಾಗಿತ್ತು. ಕಳೆದೊಂದು ವಾರದಿಂದ ಆಗಾಗ ಮಳೆಯಾಗುತ್ತಿದ್ದು, ವಾತಾವರಣ ತಂಪಾಗಿದೆ. ಹಾಗಾಗಿ, ಜೂನ್‌ 10ರಿಂದಲೇ ಶಾಲೆಗಳನ್ನು ಆರಂಭಿಸಬೇಕು ಎಂದು ಆಯಾ ಶಾಲಾ ಮುಖ್ಯಶಿಕ್ಷಕರಿಗೆ ಸೂಚನೆ ರವಾನಿಸಿದ್ದಾರೆ.

ಅಲ್ಲದೇ ಈಚರೆಗೆ ಆದ ರಜಾ ದಿನಗಳ ಅವಧಿಯನ್ನು ಸರಿದೂಗಿಸಲು ಪ್ರತಿ ಶನಿವಾರ ಅರ್ಧ ದಿನದ ಬದಲಾಗಿ ಪೂರ್ಣ ದಿನ ಹಾಗೂ ದಸರಾ ಅವಧಿಯ ರಜೆಗಳನ್ನು ಬಳಸಿಕೊಂಡು ಸರಿದೂಗಿಸಲು ಉದ್ದೇಶಿಸಲಾಗಿದೆ ಎಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !