ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ವಿಜ್ಞಾನ, ಕಲಾ ವಸ್ತು ಪ್ರದರ್ಶನ

Published 24 ಡಿಸೆಂಬರ್ 2023, 15:50 IST
Last Updated 24 ಡಿಸೆಂಬರ್ 2023, 15:50 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಗೋದುತಾಯಿ ನಗರದ ಮದರ್‌ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಮಕ್ಕಳಿಂದ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಜರುಗಿತು.

ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ತಾವು ಸಿದ್ಧಪಡಿಸಿದ ವಿಜ್ಞಾನ ಮತ್ತು ಕಲಾ ಮಾದರಿಗಳನ್ನು ಸಂಭ್ರಮದಿಂದ ತೆಗೆದುಕೊಂಡು ಬಂದರು. ಎಲ್ಲಾ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಮಾದರಿಗಳ ಬಗ್ಗೆ ವಿವರಣೆ ನೀಡಿದರು.

ಮಕ್ಕಳ ಈ ವಸ್ತುಪ್ರದರ್ಶನವನ್ನು ಪಾಲಕರು ಹಾಗೂ ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು. ಮಕ್ಕಳನ್ನು ಕೊಂಡಾಡಿ ಪ್ರೋತ್ಸಾಹ ನೀಡಿದರು.

ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಉಪಾಧ್ಯಕ್ಷ ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಕಾರ್ಯದರ್ಶಿ ಶಿವಪುತ್ರಪ್ಪ ಡೆಂಕಿ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

‘ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟ ಸೃಜನಾತ್ಮಕ, ಕ್ರಿಯಾಶೀಲ, ಸಾಮಾಜಿಕ ಹಾಗೂ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದ ಮುಖ್ಯ ಉದ್ದೇಶವಾಗಿತ್ತು’ ಎಂದು ಶಾಲೆಯ ಪ್ರಾಂಶುಪಾಲ ನಾಗೇಂದ್ರ ಬಡಿಗೇರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT