ವಿಜಯನಗರದಲ್ಲಿ ವಿಜ್ಞಾನ ಪಾರ್ಕ್
ಕಲ್ಯಾಣ ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿ ವಿಜ್ಞಾನ ಪಾರ್ಕ್ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಜಿಲ್ಲೆಯಲ್ಲಿ ಗಣಿ ಬಾಧಿತ ಪ್ರದೇಶಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಕರ್ನಾಟಕ ಪರಿಸರ ಗಣಿ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)ದ ಸಹಯೋಗ ಬಯಸಲಾಗಿದೆ. ₹ 2 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ನೋಡಲ್ ಅಧಿಕಾರಿಗಳೂ ಆದ ಜಿಲ್ಲಾಧಿಕಾರಿ ಈಗಾಗಲೇ ಕೆಎಂಇಆರ್‌ಸಿಗೆ ಪ್ರಸ್ತಾವ ಸಲ್ಲಿಸಿದ್ದಾರೆ.