ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೂಟರ್‌ ಅಪಘಾತ: ಸ್ಟಾಫ್‌ ನರ್ಸ್‌ಗೆ ಗಂಭೀರ ಗಾಯ

Last Updated 15 ಮೇ 2020, 15:34 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್-19 ಕಾರ್ಯಕ್ಕಾಗಿ ನಗರದಿಂದ ಚಿತ್ತಾಪುರಕ್ಕೆ ಹೊರಟಿದ್ದ ವೇಳೆ ಸ್ಕೂಟರ್‌ನ ಹಿಂಬದಿಯ ಚಕ್ರ ಕಳಚಿ ಬಿದ್ದ ಪರಿಣಾಮ ಸ್ಟಾಫ್‌ ನರ್ಸ್‌ ರಾಜಕುಮಾರಿ ರಾಜಾಪುರ (36) ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಿಗ್ಗೆ 8ಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಅದಕ್ಕಾಗಿ ಮತ್ತೊಬ್ಬ ಸ್ಟಾಫ್‌ ನರ್ಸ್‌ ರೇಣುಕಾ ಅವರೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ರಾವೂರ ಕ್ರಾಸ್‌ ಬಳಿ ಚಕ್ರ ಕಳಚಿದ್ದರಿಂದ ಇಬ್ಬರೂರಸ್ತೆಯ ಮೇಲೆ ಬಿದ್ದಿದ್ದಾರೆ. ರೇಣುಕಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಕುಮಾರಿ ಅವರು ಗುತ್ತಿಗೆ ಆಧಾರದಲ್ಲಿ ಸ್ಟಾಫ್‌ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದರು. ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT