ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕನ್ನಡದಲ್ಲಿ ಹೆಚ್ಚು ಅಂಕ ಪಡೆದು ಕೀರ್ತಿ ಹೆಚ್ಚಿಸಿ’

Published 20 ಮೇ 2024, 5:38 IST
Last Updated 20 ಮೇ 2024, 5:38 IST
ಅಕ್ಷರ ಗಾತ್ರ

ಕಲಬುರಗಿ: ‘ವಿದ್ಯಾರ್ಥಿಗಳು ಕನ್ನಡದಲ್ಲಿ ಹೆಚ್ಚು ಅಂಕಗಳನ್ನು ಪಡೆದು ಭಾಷೆಯನ್ನು ಉಳಿಸುವ ಮೂಲಕ ನಾಡಿನ ಹಿರಿಮೆ ಹೆಚ್ಚಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಅಧ್ಯಕ್ಷ ಗುರುಬಸಪ್ಪ ಎಸ್‌.ಸಜ್ಜನಶೆಟ್ಟಿ ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಲಬುರಗಿ ತಾಲ್ಲೂಕು ಸಮಿತಿ ಮತ್ತು ಶಕುಂತಲಾ ಪಾಟೀಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಗರದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ‘ವಿದ್ಯಾರ್ಥಿಗಳು ನೆರವು ಬೇಕಾದರೆ ಕಸಾಪವನ್ನು ಸಂಪರ್ಕಿಸಬಹುದು’ ಎಂದರು.

ದೇವೇಂದ್ರಪ್ಪ ಕಪನೂರ ಮಾತನಾಡಿ, ‘ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತಿಳಿದುಕೊಳ್ಳಬೇಕು. ಉನ್ನತ ಹುದ್ದೆಗಳನ್ನು ಪಡೆದು ರಾಜ್ಯದ ಕೀರ್ತಿ ಹೆಚ್ಚಿಸಬೇಕು’ ಎಂದು ಹೇಳಿದರು.

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸೇವಂತಾ ಚವ್ಹಾಣ್, ಶಕುಂತಲಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಚಿದಂಬರಾವ ಪಾಟೀಲ ಹಾಗೂ ಮನೋಜಕುಮಾರ ಬುರುಬುರೆ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಶಿಕ್ಷಕರನ್ನೂ ಸನ್ಮಾನಿಸಲಾಯಿತು. ಕಿರಣಕುಮಾರ ಗಾದಗಿ, ಪ್ರೇಮ್‌ಸಿಂಗ್ ಚವ್ಹಾಣ್, ಶರಣು ಹಾಗರಗುಂಡಗಿ, ಪ್ರಭವ ಪಟ್ಟಣಕರ, ವೀರಣ್ಣ ಸಿನ್ನೂರ, ಆಕಾಶ ಮರಪಳ್ಳಿ, ಸಿದ್ದರಾಮ ಹಾಜರಿದ್ದರು. ವಿಶಾಲಕ್ಷಿ ಮಾಯಣ್ಣವರ ನಿರೂಪಿಸಿದರು. ಕುಪೇಂದ್ರ ಬರಗಾಲಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT