ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘3 ಜಿ.ಪಂ, 30 ತಾ.ಪಂ ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ’

Last Updated 15 ಜುಲೈ 2021, 8:44 IST
ಅಕ್ಷರ ಗಾತ್ರ

ಕಲಬುರ್ಗಿ: ’ಜಿಲ್ಲೆಯಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ‘ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಮೊಹ್ಸಿನ್ ತಿಳಿಸಿದರು.‌

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಈಚೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಹನ್ನಾನ್ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣೆ ಪೂರ್ವಸಿದ್ಧತೆ ಕುರಿತು ಚರ್ಚಿಸಿದ್ದಾರೆ. ಕಲಬುರ್ಗಿಯ 3 ಜಿಲ್ಲಾ ಪಂಚಾಯಿತಿ, 30 ತಾಲ್ಲೂಕು ಪಂಚಾಯಿತಿ ಹಾಗೂ ಪಾಲಿಕೆಯ 22 ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾದಗಿರಿ ಜಿಲ್ಲೆಯಲ್ಲಿ 2 ಜಿಲ್ಲಾ ಪಂಚಾಯಿತಿ ಹಾಗೂ 15 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ‘ ಎಂದು ಅವರು ತಿಳಿಸಿದರು.

’ಎಲ್ಲಾ ಪಕ್ಷಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿವೆ. 371 (ಜೆ) ಸಮರ್ಪಕವಾಗಿ ಜಾರಿಯಾಗದ ಕಾರಣ ಈ ಭಾಗದ ಜನರಿಗೆ ಉದ್ಯೋಗ ಹಾಗೂ ಸೌಲಭ್ಯ ಸಿಕ್ಕಿಲ್ಲ. ಎಸ್‌ಡಿಪಿಐ ಗೆಲುವು ಸಾಧಿಸಿದರೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ‘ ಎಂದರು.

ಪಕ್ಷದ ಮುಖಂಡರಾದ ರಿಜ್ವಾನ್ ಅಹಮದ್, ಅಬ್ದುಲ್ ರಹೀಂ ಪಟೇಲ್, ಸಯ್ಯದ್ ದಸ್ತಗೀರ್, ಮೊಹಮ್ಮದ್ ಫಾಹೀಮ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT