ಪಾಲಿಕೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

7
ಬೀದಿ ನಾಯಿ ಸೆರೆ ಕಾರ್ಯಾಚರಣೆ

ಪಾಲಿಕೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ಕಲಬುರ್ಗಿ: ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪಾಲಿಕೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ಸಲ್ಲಿಸಲಾಗಿದೆ. ಹಾಗರಗಾ ಕ್ರಾಸ್ ಬಳಿ ಪ್ರತಿಭಟನೆ ಮಾಡಲಾಗಿದೆ. ಆದಾಗ್ಯೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಬೀದಿ ನಾಯಿ ದಾಳಿಗೆ ಒಳಗಾಗಿರುವ ಪಾಲಕರ ಕುಟುಂಬಕ್ಕೆ ಪರಿಹಾರವನ್ನೂ ಕೊಟ್ಟಿಲ್ಲ. ಮಕ್ಕಳು, ಮಹಿಳೆಯರು ಮತ್ತು ವಯಸ್ಸಾದವರು ರಸ್ತೆಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಆದ್ದರಿಂದ ಈಗಲಾದರೂ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಸ್‌ಡಿಪಿಐ ರಾಜ್ಯ ಘಟಕದ ಸದಸ್ಯ ಕಾರ್ಯದರ್ಶಿ ಅಬ್ದುಲ್ ರಹೀಮ್ ಪಟೇಲ್, ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಮೊಸಿನ್, ಪ್ರಧಾನ ಕಾರ್ಯದರ್ಶಿ ಡಾ. ರಿಜ್ವಾನ್ ಅಹ್ಮದ್, ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಖಜಾಂಚಿ ಸೈಯದ್ ರಫೀಕ್ ಮಂಠಾಳ, ಸೈಯದ್ ದಸ್ತಗಿರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !