ದ್ವಿತೀಯ ದರ್ಜೆ ಸಹಾಯಕ ನೇಣಿಗೆ ಶರಣು

ಬುಧವಾರ, ಜೂನ್ 26, 2019
28 °C

ದ್ವಿತೀಯ ದರ್ಜೆ ಸಹಾಯಕ ನೇಣಿಗೆ ಶರಣು

Published:
Updated:

ಚಿಂಚೋಳಿ: ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಸುಭಾಷ್ಚಂದ್ರ ಚಿಂಚೋಳಿಕರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಇಲ್ಲಿನ ಚಂದಾಪುರದಲ್ಲಿ ನಡೆದಿದೆ.

ಹೈಕ ಶಿಕ್ಷಣ ಸಂಸ್ಥೆಯ ಸಿ.ಬಿ.ಪಾಟೀಲ ಕಾಲೇಜಿನಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಾಲೇಜಿನ ಪ್ರಾಚಾರ್ಯರ ವಸತಿ ಗೃಹದಲ್ಲಿ ಶುಕ್ರವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ.

ಅರ್ಥಿಕ ಸಮಸ್ಯೆ(ಸಾಲ)ಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಂಶುಪಾಲರ ವಸತಿ ಗೃಹವನ್ನು ಸಿಬ್ಬಂದಿಗಳು ಬಳಸುತ್ತಾರೆ.  ಪ್ರಾಚಾರ್ಯರು ಇರಲಿಲ್ಲ ಎನ್ನಲಾಗಿದೆ.

ಮೃತರು ಮಹಾಗಾಂವ ವಾಡಿ ಗ್ರಾಮದ ನಿವಾಸಿಯಾಗಿದ್ದು ಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ತಂದೆತಾಯಿ ಇದ್ದಾರೆ.

ಘಟನಾ ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ರಘು ಹಾಗೂ ಸಿಬ್ಬಂದಿ ಭೇಟಿ ನೀಡಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !