ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಬಸ್ ನಿಲ್ದಾಣ, ಡಿಪೊಗಳ ಸುತ್ತ ನಿಷೇಧಾಜ್ಞೆ

Last Updated 7 ಏಪ್ರಿಲ್ 2021, 5:41 IST
ಅಕ್ಷರ ಗಾತ್ರ

ಕಲಬುರ್ಗಿ: ಅನಿರ್ದಿಷ್ಟ ಅವಧಿಯವರೆಗೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳ ಬಸ್ ನಿಲ್ದಾಣ ‌ಹಾಗೂ ಡಿಪೊಗಳ ಸುತ್ತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ‌ಜಾರಿಗೊಳಿಸಿದ್ದಾರೆ.

ಜಿಲ್ಲೆಯ ಆಳಂದ, ಸೇಡಂ, ಚಿತ್ತಾಪುರ, ಕಾಳಗಿ, ಅಫಜಲಪುರ, ಚಿಂಚೋಳಿ, ಜೇವರ್ಗಿ ನಿಲ್ದಾಣಗಳ ಸುತ್ತಮುತ್ತ ಯಾರೂ ಗುಂಪುಗೂಡಬಾರದು ಹಾಗೂ ‌ಮಾರಕಾಸ್ತ್ರಗಳನ್ನು ಕೊಂಡೊಯ್ಯಬಾರದು ಎಂದು ಆದೇಶದಲ್ಲಿ ‌ತಿಳಿಸಿದ್ದಾರೆ.

ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ನಿಲ್ದಾಣ, ಡಿಪೊಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT