ಮಂಗಳವಾರ, ಜನವರಿ 25, 2022
25 °C

ಅಫಜಲಪುರ: ಚೆಕ್ ಪೋಸ್ಟ್‌ಗಳಲ್ಲಿ ಮತ್ತಷ್ಟು ಬಿಗಿ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ (ಕಲಬುರಗಿ ಜಿಲ್ಲೆ): ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದ್ದರಿಂದ ತಾಲ್ಲೂಕಿನ ಮಹಾರಾಷ್ಟ್ರದ ಗಡಿಭಾಗದ ಗ್ರಾಮಗಳಾದ ಬಳೂರಗಿ, ಅರ್ಜುನಗಿ ಹಾಗೂ ಮಾಶಾಳ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ ಎಂದು ತಹಶೀಲ್ದಾರ್ ನಾಗಮ್ಮ ಎಂ.ಕೆ. ತಿಳಿಸಿದರು.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಅಲ್ಲದೆ ಪರೀಕ್ಷೆ 72 ಗಂಟೆ ಒಳಗೆ ಇದ್ದರೆ ಮಾತ್ರ ವಾಹನಗಳನ್ನು ರಾಜ್ಯದ ಗಡಿ ಒಳಗೆ ಪ್ರವೇಶ ಮಾಡಲು ಅವಕಾಶ ನೀಡಲಾಗುತ್ತದೆ. ಪ್ರತಿಯೊಂದು ವಾಹನವನ್ನು ಚೆಕ್ ಪೋಸ್ಟ್‌ನಲ್ಲಿ ತಪಾಸಣೆ ಮಾಡಿ ಗಡಿ ಒಳಗೆ ಬಿಡಲಾಗುತ್ತದೆ. ದೇವಲ ಗಾಣಗಾಪುರ ಮತ್ತು ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ದಿನಾಲೂ ಹೆಚ್ಚಿನ ವಾಹನಗಳು ಬರುತ್ತಿರುವುದರಿಂದ ಚೆಕ್‌ ಪೋಸ್ಟ್‌ನಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಿದ್ದು, ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.