ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಿ’

Published 19 ಜೂನ್ 2024, 16:21 IST
Last Updated 19 ಜೂನ್ 2024, 16:21 IST
ಅಕ್ಷರ ಗಾತ್ರ

ಸೇಡಂ: ‘ಮಳೆ ನೀರಿನ ಜತೆ ಕಲುಷಿತ ನೀರು ಪೂರೈಕೆಯಾಗಿ ಜನರ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಪಂಚಾಯಿತಿ ಮಟ್ಟದ ಅಧಿಕಾರಿಗಳು ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸುತ್ತಿರಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಕುಮಾರ ಬುಡದೆ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಐಎಸ್‌ಆರ್‌ಎ ಹಸ್ತಕಲಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ನೀರು ಪರೀಕ್ಷೆ ತರಬೇತಿ ಮತ್ತು ಎಫ್.ಟಿ.ಕೆ ಕಿಟ್ ವಿತರಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಪಂಚಾಯಿತಿ ಅಧಿಕಾರಿಗಳಿಗೆ ಎಫ್‌ಟಿಕೆ ವಿತರಿಸಲಾಗಿದ್ದು ಅದರ ಸದ್ಬಳಕೆಯಾಗುವಂತೆ ಕೆಲಸ ಮಾಡಬೇಕು. ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಿದಂತಾಗುತ್ತದೆ’ ಎಂದರು.

27 ಗ್ರಾಮ ಪಂಚಾಯಿತಿಗಳಿಗೆ ಎಫ್‌ಟಿಕೆ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವಿಕುಮಾರ, ಅಬ್ದುಲ್ ಸಲಾಂ, ರಾಘವೇಂದ್ರ, ಸಂತೋಷ ಮುಲಗೆ, ರಾಜಶೇಖರ, ನಾಗಪ್ಪ ದೇವನೂರ, ರಾಧಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT