ಸೇಡಂ: ‘ಕರ್ನಾಟಕ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರ ಸಹಕಾರ ಅವಶ್ಯಕ. ಕರ್ನಾಟಕ, ಕನ್ನಡ ನಮ್ಮದು ಎಂಬ ಭಾವನೆಯಿಂದ ಪಾಲ್ಗೊಳ್ಳಬೇಕು’ ಎಂದು ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಹೇಳಿದರು.
ಪಟ್ಟಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯೋತ್ಸವ ಆಚರಣೆಗೆ ಕನ್ನಡಪರ ಸಂಘಟನೆಗಳು ಸಹಕರಿಸಬೇಕು. ಸರ್ಕಾರದ ನಿಯಮದಂತೆ ವಿವಿಧ ಇಲಾಖೆಗಳಲ್ಲಿ ರಾಜ್ಯೋತ್ಸವ ಆಚರಿಸಿದ ನಂತರ ತಾಲ್ಲೂಕು ಆಡಳಿತದಿಂದ ಆಚರಿಸುವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಆಗಮಿಸಬೇಕು. ಸರ್ಕಾರದಿಂದ ಆಚರಿಸಲಾಗುವ ಪ್ರತಿಯೊಂದು ಜಯಂತಿಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದ್ದರೂ ಕೆಲವರು ಪಾಲ್ಗೊಳ್ಳದೆ ಇರುವುದು ಬೇಸರದ ಸಂಗತಿ. ಹೀಗೆ ಮುಂದುವರಿದಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ರಾಜ್ಯೋತ್ಸವ ಆಚರಣೆಗೆ ಸಲಹೆ-ಸೂಚನೆಗಳನ್ನು ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷೆ ಸುಮಾ ಚಿಮ್ಮನಚೋಡ್ಕರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕರಯ್ಯಸ್ವಾಮಿ ಇಮಡಾಪುರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹೋಳ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ರಾಜಕುಮಾರ ಶೆಟ್ಟಿ, ವಿಜಯಕುಮಾರ್ ಯಾದಗಿರ್, ಮಲ್ಲಿಕಾರ್ಜುನ್ ಪೂಜಾರಿ, ಶಿವಯೋಗಿ ಸಕ್ಪಾಲ್, ಹಸನ ಚಾವೂಸ್, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಗುತ್ತೇದಾರ, ವರದಾಸಾಮಿ ಹಿರೇಮಠ್, ಹಣಮಂತ್ ಹಿಂಜಳಿಕರ್ ಸೇರಿದಂತೆ ಇನ್ನಿತರರು ಇದ್ದರು.
ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ: ತಹಶೀಲ್ದಾರ್ ಶ್ರೀಯಂಕ ಧನಶ್ರೀ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ‘ವಾಲ್ಮೀಕಿ ಜಯಂತಿಯ ಆಚರಣೆಗೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜ ಬಾಂಧವರು ಸಹಕರಿಸಬೇಕು ಕಾರ್ಯಕ್ರಮದ ಸಾನಿಧ್ಯ, ಉಪನ್ಯಾಸ ಸೇರಿದಂತೆ ವಿವಿಧಗಳ ಸಿದ್ಧತೆಗಳನ್ನು ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡ ಸಾಬಣ್ಣ ಸುಬ್ಬಕ್ಕನೋರ್, ಸಿದ್ದಪ್ಪ ನಾಯ್ಕೋಡಿ, ಧರ್ಮಣ್ಣ ಹಂಗನಹಳ್ಳಿ, ಶಂಕರ ಹಂಗನಳ್ಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.