ಶುಕ್ರವಾರ, ಡಿಸೆಂಬರ್ 2, 2022
19 °C

ಸೇಡಂ: ಕೋಲಿ ಸಮಾಜದ ಮುಖಂಡನ ಕೊಲೆ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇಡಂ (ಕಲಬುರಗಿ ಜಿಲ್ಲೆ): ಕೋಲಿ ಕಬ್ಬಲಿಗ ಸಮಾಜದ ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಮುತ್ಯಾಲ (65) ಅವರನ್ನು ಬೆಳಿಗ್ಗೆ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಅವರದು ವಿಷ್ಣು ಎಲೆಕ್ಟ್ರಾನಿಕ್ಸ್ ಅಂಗಡಿಯಿತ್ತು. ನಿತ್ಯವೂ ರಾತ್ರಿ ಅಂಗಡಿಯಲ್ಲಿ ಮಲಗುತ್ತಿದ್ದರು. 

ಕೊಲೆಯಾದ ಮಲ್ಲಿಕಾರ್ಜುನ ಜೆಡಿಎಸ್ ಪಕ್ಷದಲ್ಲಿದ್ದರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರಿದ್ದರು. ಸೋಮವಾರ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಿವಕುಮಾರ ಪಾಟೀಲ ತೇಲ್ಕೂರ, ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು