ಸೇಡಂ: ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಏ.30 ರಂದು ಗುರುವಾರ ಸಂಜೆ 5 ಗಂಟೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದ ಉಚಿತ ಅಂಬುಲೆನ್ಸ್ ಸೇವೆ ಹಾಗೂ ಉದ್ಯೋಗ ಮೇಳಕ್ಕೆ ಚಾಲನೆ ಸಿಗಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ತಿಳಿಸಿದ್ದಾರೆ.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ಅವಧಿಯಲ್ಲಿ ಕ್ಷೇತ್ರದ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್ ಸೇವೆ ಒದಗಿಸಲಾಗಿತ್ತು. ಜನರ ಬೇಡಿಕೆ ಹಾಗೂ ಕ್ಷೇತ್ರದ ಆರೋಗ್ಯ ಕಾಳಜಿಯ ದೃಷ್ಟಿಯಿಂದ ಆಂಬುಲೆನ್ಸ್ ಸೇವೆಗೆ ಪುನಃ ಚಾಲನೆ ನೀಡಲಾಗುತ್ತಿದೆ. ಅಲ್ಲದೆ ಕ್ಷೇತ್ರದಲ್ಲಿ ಸಾಕಷ್ಟು ಸಿಮೆಂಟ್ ಕಂಪನಿಗಳಿದ್ದರೂ ಸಹ ಯುವ ಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಉದ್ಯೋಗ ಮೇಳಕ್ಕೆ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಅಲ್ಲದೆ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತಹ ಕೆಲಸವನ್ನು ಮಾಡಲಿದ್ದು, ಅವರೊಂದಿಗೆ ಮಾಜಿ ಮಂತ್ರಿಗಳು, ಶಾಸಕರು, ಜನಪ್ರತಿನಿಧಿಗಳು, ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-31-708642707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.