ಸೇಡಂ: ಸೇಡಂನ ಜನರ ಬೇಡಿಕೆ ಮೇರೆಗೆ ಅಂಬ್ಯಲೆನ್ಸ್ ಸೇವೆ ಪುನಾರಂಭಿಸಲು ನಿರ್ಧರಿಸಲಾಗಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ಏ.30 ರಂದು ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಏ.30ರಂದು ಸಂಜೆ 4.30ಕ್ಕೆ ವಿವಿಧ ಕಾರ್ಯಕ್ರಮಗಳ ಚಾಲನಾ ಸಮಾರಂಭ ಆಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಅಂಬುಲೆನ್ಸ್ ಸೇವೆ ನೀಡಲಾಗಿತ್ತು. ಈಗ ಸಕಾಲಕ್ಕೆ ಜನರಿಗೆ ಅಂಬುಲೆನ್ಸ್ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಜನರ ಆರೋಗ್ಯ ಕಾಳಜಿಯ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗುತ್ತಿದೆ’.

‘ಕ್ಷೇತ್ರದಲ್ಲಿ ಸಾಕಷ್ಟು ಸಿಮೆಂಟ್ ಕಂಪೆನಿಗಳಿದ್ದರೂ ಸಹ ಯುವ ಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಸುತ್ತಲಿನ ಪ್ರದೇಶಗಳ ಕಂಪನಿಗಳಲ್ಲಿ ಯುವಕರಿಗೆ ಕೌಶಲ ಹಾಗೂ ತರಬೇತಿ ನೀಡಿ, ಕಾಯಂ ಉದ್ಯೋಗ ಕೊಡಿಸುವ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿ ಮತ್ತು ಮನೆ-ಮನೆಗೆ ಉದ್ಯೋಗ ಸಂಚಾರವು ನಡೆಯಲಿದೆ’ ಎಂದು ತಿಳಿಸಿದ್ದಾರೆ.

ಜನತಾಳದ ಬೆಳ್ಳಿ ಮಹೋತ್ಸವ ಸಂಭ್ರಮ, ಕ್ಷೇತ್ರದ ಜನರೊಂದಿಗೆ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜೆಡಿಎಸ್ ಪಕ್ಷದ ಡಿಜಿಟಲ್ ಅಭಿಯಾನವೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-31-1494656529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.