ಸೇಡಂ: ‘ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ ಕುಮಾರಸ್ವಾಮಿ ಅವರು ಏ.30ರಂದು ನಗರದ ತಾಲ್ಲೂಕು ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ ಗುತ್ತೇದಾರ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ನಿರುದ್ಯೋಗ, ಭ್ರಷ್ಟಾಚಾರ, ಅಭಿವೃದ್ಧಿ ಕಾರ್ಯಗಳ ಕುಂಠಿತಗೊಂಡಿವೆ. ಜನರು ಸರ್ಕಾರದ ಯೋಜನೆಗಳ ವಿರುದ್ಧ ಬೇಸತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಟುತ್ತಾ ಸಾಗಿದ್ದು, ಜನರು ಆಕ್ರೋಶಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜನನರೊಂದಿಗೆ ಜನತಾದಳ ಕಾರ್ಯಕ್ರಮ ನಿಖಿಲ ಕುಮಾರಸ್ವಾಮಿ ಮಧ್ಯಸ್ಥಿಕೆಯಲ್ಲಿ ನಡೆಯಲಿದೆ’ ಎಂದು ತಿಳಿಸಿದರು.

‘ಜೆಡಿಎಸ್ ಪಕ್ಷವು ರಾಜ್ಯದ ಜನತೆಗೆ ನೀಡಿದ ವಿಶೇಷ ಕೊಡುಗೆಗಳನ್ನು ತಿಳಿಸುವುದರ ಜೊತೆಗೆ, ಅಲ್ಲದೆ ನಮ್ಮ ಭಾಗದ ಜನರ ಸಮಸ್ಯೆಗಳನ್ನು ಆಲಿಸುವಂತಹ ಕೆಲಸವನ್ನು ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಜನರಿಗೆ ಜೆಡಿಎಸ್ ಪಕ್ಷದ ಕಾರ್ಯಗಳನ್ನು ತಿಳಿಸಬೇಕು’ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಗಾಡದಾನ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-31-819660748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.