ಸೇಡಂ: ತಾಲ್ಲೂಕಿನ ರಂಜೋಳ ಗ್ರಾಮದಲ್ಲಿ ಈಚೆಗೆ ಬೆಂಕಿಗಾಹುತಿಯಾದ ಮನೆಯ ಸಂತ್ರಸ್ತ ಕುಟುಂಬಕ್ಕೆ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ಭೇಟಿ ನೀಡಿ ಸಾಂತ್ವನ ಹೇಳಿರುವುದನ್ನೇ ಗ್ರಾಮದ ಮುಖಂಡ ಸತೀಶರೆಡ್ಡಿ ಪಾಟೀಲ ರಾಜಕೀಯ ಮಾಡುತ್ತಿರುವುದು ಸರಿಯಾದ ನಡೆಯಲ್ಲ’ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ ತೊಟ್ನಳ್ಳಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ನೊಂದ ಕುಟುಂಬಕ್ಕೆ ಪರಿಹಾರ ಕೊಡಿಸುವುದು ನಿಮ್ಮಿಂದ ಆಗಲಿಲ್ಲ, ಮಾಜಿ ಶಾಸಕ ತೇಲ್ಕೂರ್ ಅವರು ಆ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತಿರುವುದು ನಿಮಗೆ ಸರಿ ಎನಿಸುತ್ತಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಆಡಳಿತ ಪಕ್ಷ ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಅವರ ಗಮನಕ್ಕೆ ತರುವ ಕೆಲಸ ವಿರೋಧ ಪಕ್ಷದವರದ್ದು. ಆ ಕೆಲಸ ತೇಲ್ಕೂರ್ ಮಾಡಿದ್ದಾರೆ. ಸಮಸ್ಯೆಗಳಿಗೆ ಸ್ಪಂದಿಸಿದ್ದರೆ ಅವರು ನಿಮ್ಮೂರಿಗೆ ಬರುತ್ತಿರಲಿಲ್ಲ. ತಮ್ಮ ಗ್ರಾಮಸ್ಥರಿಗೆ ನಿಮ್ಮಿಂದ ನ್ಯಾಯ ಕೊಡಿಸಲು ಸಾಧ್ಯವಾಗದೇ ಇರುವ ನಿಮಗೆ ತೇಲ್ಕೂರ್ ಅವರ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡುವ ನೈತಿಕತೆ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-31-1069496661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.