ಸೇಡಂ: ‘ನಗರದ ಬಸವೇಶ್ವರ ಮೂರ್ತಿಯಿಂದ ಕೋಡ್ಲಾ ಕ್ರಾಸ್ ವರೆಗೆ ನಡೆಯುತ್ತಿರುವ ಡಾಂಬರು ರಸ್ತೆ ನಿರ್ಮಾಣ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ’ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ನಾನು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾರೊಬ್ಬ ಅಧಿಕಾರಿಯಾಗಲಿ, ಸಂಬಂಧಪಟ್ಟ ಗುತ್ತಿಗೆದಾರರು ಇರಲಿಲ್ಲ’ ಎಂದು ದೂರಿದ್ದಾರೆ.

‘ಮನಬಂದಂತೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಬಿರುಬಿಸಿಲಿನ ಮಧ್ಯೆಯೂ ಸಹ ಕಾಮಗಾರಿ ನಡೆಯುತ್ತಿದೆ. ಒಂದು ರೋಲರ್ ಕೂಡ ಇರದೆ ಡಾಂಬರೀಕರಣ ರಸ್ತೆ ಹೇಗೆ ನಿರ್ಮಿಸಲು ಸಾಧ್ಯವೆಂಬುದೇ ಅರ್ಥವಾಗುತ್ತಿಲ್ಲ. ಡಾಂಬರು ಹಾಕಿದ ತಕ್ಷಣ ರೋಲರ್ ಓಡಿಸಿದರೆ ರಸ್ತೆ ಗುಣಮಟ್ಟದ್ದಾಗಿರುತ್ತದೆ. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಮಿಕರ ಮೇಲೆ ಬಿಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

‘ಸೂಚನಾ ಫಲಕ, ಮಾರ್ಗಸೂಚಿಗಳನ್ನು ಹಾಕಿಲ್ಲ. ನೂರಾರು ವಾಹನಗಳು ಸಂಚರಿಸುವ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಸಂಪೂರ್ಣವಾಗಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಇದರಿಂದಾಗಿ ರಸ್ತೆಯೂ ಕಳಪೆ ಗುಣಮಟ್ಟದಿಂದ ಕೂಡಿದ್ದು, ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಲೋಕಾಯುಕ್ತರಿಗೆ ದೂರು ನೀಡಬೇಕಾಗುತ್ತದೆ’ ಎಂದು ಗುತ್ತೇದಾರ ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-31-1549079766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.