ಕಲಬುರಗಿ: ಸೆಪ್ಟೆಂಬರ್ 19ರಿಂದ 21ರವರೆಗೆ ಇಂಡೊನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ 10ನೇ ಶಿಟೋರಿಯೋ ಕರಾಟೆ ಡೂ ಚಾಂಪಿಯನ್‌ಶಿಪ್‌ಗೆ ಜಿಲ್ಲೆಯ ಕರಾಟೆಪಟು ಮನೋಹರ ಕುಮಾರ ಬೀರನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆ ಮಹಿಳಾ ಕಾರ್ಯದರ್ಶಿ ಸುನಿತಾ ದೊಡ್ಡಮನಿ ತಿಳಿಸಿದ್ದಾರೆ.
ಮನೋಹರ ಅವರು, 4ನೇ ಬಾರಿಗೆ ಈ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದು, 84 ಕೆ.ಜಿಯ ಕುಮಿಟೆ(ಫೈಟ್) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. 2018ರಲ್ಲಿ ಇಂಡೋನೇಷ್ಯಾದಲ್ಲಿ ನಡೆದ ಚಾಂಪಿಯನ್‌ಶಿಪ್‌ನಲ್ಲಿ ಕಂಚಿಕ ಪದಕ ಗೆದ್ದಿದ್ದರು. ಅಲ್ಲದೆ ಅವರು,ರಾಜ್ಯ, ರಾಷ್ಟ್ರಮಟ್ಟದಲ್ಲೂ ಹಲವು ಪದಕಗಳನ್ನು ಗೆದ್ದಿದ್ದಾರೆ ಎಂದು ತಿಳಿಸಿದರು.
ಸದ್ಯ ಇಂಡೊನೇಷ್ಯಾದಲ್ಲಿ ನಡೆಯಲಿರುವ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸಾಧನೆ ಮಾಡಲಿ ಎಂದು ಅಖಿಲ ಭಾರತ ಶೀಟೊ-ರಿಯೋ ಕರಾಟೆ ಡೂ ಯುನಿಯನ್ ಮತ್ತು ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆ ಅಧ್ಯಕ್ಷ ಶಿಹಾನ್ ಸಿ.ಎಸ್., ಅರುಣ್ ಮಾಚಯ್ಯಾ, ಕಲ್ಯಾಣ ಕರ್ನಾಟಕ ಅಧ್ಯಕ್ಷ ದಶರಥ ಎಸ್. ದುಮ್ಮನ್ಸೂರ ಸೇರಿದಂತೆ ಇತರ ಸಂಘ ಸಂಸ್ಥೆಗಳವರು ಶುಭಹಾರೈಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.