ಕಲಬುರಗಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(ಕೆಎಸ್‌ಸಿಎ) ರಾಯಚೂರು ವಲಯದ 16 ವರ್ಷದೊಳಗಿನ ಬಾಲಕರ ಕ್ರಿಕೆಟ್ ತಂಡಕ್ಕೆ ಆಟಗಾರರ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆ ಬೀದರ್‌ನಲ್ಲಿ ಗುರುವಾರ (ಆ.17) ಮತ್ತು ಶುಕ್ರವಾರ(ಆ.18) ನಡೆಯಲಿದೆ.
ಬೀದರ್‌ನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಜರುಗುವ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ಕಲಬುರಗಿ, ಬಾಗಲಕೋಟೆ, ಬೀದರ್, ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕ್ರೀಡಾಪಟುಗಳು ಪಾಲ್ಗೊಳ್ಳುವರು ಎಂದು ಕೆಎಸ್‌ಸಿಎ ರಾಯಚೂರು ವಲಯ ಸಂಯೋಜಕ ಅರ್ಷದ್ ಹುಸೇನ್ ತಿಳಿಸಿದ್ದಾರೆ.
17ರ ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ವಿಜಯಪುರ, ಬಾಗಲಕೋಟೆ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಆಟಗಾರರು ಪಾಲ್ಗೊಳ್ಳಬಹುದು. 18ರಂದು ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಕ್ರೀಡಾಪಟುಗಳ ಆಯ್ಕೆ ಟ್ರಯಲ್ಸ್ ನಡೆಯಲಿದೆ.