ಬುಧವಾರ, ಆಗಸ್ಟ್ 4, 2021
22 °C
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಎಚ್‌ಕೆಸಿಸಿಐ ಮನವಿ

ಕ.ಕ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನೂತನ ಕೈಗಾರಿಕಾ ನೀತಿಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಪ್ರಥಮ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರಿಗೆ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯು ಮನವಿ ಮಾಡಿದೆ.

‘ಕಲ್ಯಾಣ ಕರ್ನಾಟಕದ ಕಲಬುರ್ಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳು ಹಿಂದುಳಿದಿದ್ದು, ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿವೆ. 371 (ಜೆ) ವಿಶೇಷ ಸ್ಥಾನಮಾನ ಸಿಕ್ಕರೂ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ಉದ್ಯಮ ಅಭಿವೃದ್ಧಿಪಡಿಸಲು ಆದ್ಯತೆ ನೀಡಬೇಕು’ ಎಂದು ಮಂಡಳಿಯ ಅಧ್ಯಕ್ಷ ಅಮರನಾಥ ಸಿ.ಪಾಟೀಲ ಮತ್ತು ಗೌರವ ಕಾರ್ಯದರ್ಶಿ ಶಶಿಕಾಂತ ಬಿ. ಪಾಟೀಲ ಮನವಿ ಮಾಡಿದ್ದಾರೆ.

‘ಕೈಗಾರಿಕಾ ನೀತಿ ರಚನೆ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರತ್ಯೇಕ ವಲಯವನ್ನಾಗಿ ಪರಿಗಣಿಸಬೇಕೆ ಹೊರತು ಮುಂಬೈ ಕರ್ನಾಟಕದೊಂದಿಗೆ ಸೇರಿಸಬಾರದು. ವಿಶೇಷ ಆರ್ಥಿಕ ವಲಯ ಮತ್ತು ಕೈಗಾರಿಕಾ ಕಾರಿಡಾರ್‌ ಒಳಗೊಂಡಂತೆ ಕೈಗಾರಿಕಾ ನೀತಿ ರಚಿಸಬೇಕು. ದಾಲ್‌ಮಿಲ್‌ಗಳನ್ನು ಕೃಷಿ ಆಧಾರಿತ ಕೈಗಾರಿಕ ವಲಯವೆಂದು ಪರಿಗಣಿಸಬೇಕು. ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ಅವರು ಕೋರಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.