ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾಪುರ: ಸೇವಾ ಸಿಂಧು ಕೇಂದ್ರ ಉದ್ಘಾಟನೆ

Last Updated 25 ಜನವರಿ 2022, 3:57 IST
ಅಕ್ಷರ ಗಾತ್ರ

ಕಮಲಾಪುರ: ಪಟ್ಟಣದ ಆಯುರ್ವೇದ ಆಸ್ಪತ್ರೆ ಪಕ್ಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸೋಮವಾರ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಿಸಲಾಯಿತು.

ಸಂಸ್ಥೆಯ ತಾಲ್ಲೂಕು ಕ್ಷೇತ್ರ ಯೋಜನಾಧಿಕಾರಿ ಕಲ್ಲನಗೌಡ ಎಸ್‌.ಮಾತನಾಡಿ, ಕೇಂದ್ರ ಸರ್ಕಾರದ ಸೇವಾ ಸಿಂಧು ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯಲ್ಲಿ 113 ಕಾಮನ್‌ ಸರ್ವಿಸ್‌ ಸೆಂಟರ್‌ ತೆರಯಲಾಗಿದೆ. ಜನರಿಗೆ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಜನನ, ಮರಣ, ಆಯುಶ್ಮಾನ, ಇ–ಶ್ರಮ್‌, ಆಧಾರ, ರೇಶನ್‌ ಕಾರ್ಡ್‌ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗುವುದು. ಈಗಾಗಲೇ 1100 ಜನರಿಗೆ ಇ–ಶ್ರಮ್‌ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ 6 ವರ್ಷದಿಂದ ಕಲಬುರಗಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆ ಅನುಷ್ಠಾನಗೊಳಿಸಿದೆ. ಆರ್ಥಿಕವಾಗಿ ಹಿಂದುಳಿದ ಬಡಜನರ ಜೀವನ ಮಟ್ಟ ಸುಧಾರಿಸಲು ಪಣತೊಟ್ಟಿದ್ದು, ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ನೆರವು ನೀಡಿ ಸ್ವಾವಲಂಬಿ ಬದುಕು ಸಾಗಿಸಲು ಸಹಕಾರ ನೀಡಲಾಗಿದೆ ಎಂದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್‌ ಸತ್ತಾರ, ಧರ್ಮಸ್ಥಳ ಸಂಸ್ಥೆ ವಲಯ ಮೇಲ್ವಿಚಾರಕಿ ಕಮಲಾಕ್ಷಿ, ನೋಡಲ್‌ ಅಧಿಕಾರಿ ರಾಧಾಶ್ರೀ, ಸಾಯಬಿ, ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಲೋಂಡೆ, ಜ್ಯೋತಿ ಕದಂ, ಹೀರಾಬಾಯಿ ವಾಘಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT