ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಸಂತ ಸೇವಾಲಾಲ್‌ ಜಯಂತಿ

Last Updated 16 ಫೆಬ್ರುವರಿ 2022, 5:52 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಂತ ಸೇವಾಲಾಲ್‌ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ತಹಶೀಲ್ದಾರ್‌ ಪ್ರಕಾಶ ಕುದರಿ ಅವರು ಸಂತ ಸೇವಾಲಾಲ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು. ಮುಖ್ಯ ಅತಿಥಿ
ಯಾಗಿ ಭಾಗವಹಿಸಿದ್ದಸಂಸದ ಡಾ.ಉಮೇಶ ಜಾಧವ ಮಾತನಾಡಿ, ‘ಸೇವಾಲಾಲ್‌ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವವಾಗಿದ್ದಾರೆ. ಅವರ ಬದುಕು, ಸಂದೇಶ ಲೋಕಕಲ್ಯಾಣಕ್ಕಾಗಿ ಮುಡುಪಾಗಿತ್ತು. ಅವರು ಹೇಳಿದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮ ಜವಾಬ್ದಾರಿ’ ಎಂದು ಅವರು
ಹೇಳಿದರು.

ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ಮುರಾಹರಿ ಮಹಾರಾಜ್, ಸೇವಾಲಾಲ್‌ ಜಯಂತಿ ಸಮಿತಿ ಅಧ್ಯಕ್ಷ ಶ್ಯಾಮರಾವ ಪವಾರ, ಪ್ರಧಾನ ಕಾರ್ಯದರ್ಶಿ ವಿನೋದ ಚವ್ಹಾಣ, ಮಹಾನಗರ ಪಾಲಿಕೆಯ ಸದಸ್ಯೆ ಲತಾ ರಾಠೋಡ, ಆಲ್ ಬಂಜಾರಾ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ರಾಮಚಂದ್ರ ಜಾಧವ, ಸರ್ಕಾರಿ ನಿವೃತ್ತಿ ನೌಕರರ ಸಂಘದ ಅಧ್ಯಕ್ಷ ಬಿ.ಬಿ. ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಎನ್‌ಪಿಸಿಸಿ ಸೆಕ್ರೇಟರಿ ಜಗದೇವಿ ಚವ್ಹಾಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸೋನಾಬಾಯಿ ನಾಯಕ, ಸೇರಿದಂತೆ ಅನೇಕ ಸಮಾಜ ಮುಖಂಡರು ಪಾಲ್ಗೊಂಡಿದ್ದರು.

ದೇಸಾಯಿ ಕಾಲೇಜ್‌: ನಗರದಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ್ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಸಂದೀಪ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ನಾಗೂರ್, ಬೋಧಕ ಸಿಬಂದಿಯಾದ ನಾಗರಾಜ ಪಟ್ಟಣಕರ, ಆನಂದತೀರ್ಥ ಜೋಶಿ, ಅಮರ, ಅನುರಾಧಾ, ಸುಪ್ರೀತಾ, ಪ್ರಿಯಾಂಕಾ ಹಾಗೂ ಭೋಧಕೇತರ ಸಿಬಂದಿಯಾದ ಮಂಜುನಾಥ ಬನ್ನೂರ್, ರಾಧಿಕಾ ಗುತ್ತೇದಾರ, ಅನ್ನಪೂರ್ಣ, ಶ್ರುತಿ, ಶಿಲ್ಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT