ಸೋಮವಾರ, ಜನವರಿ 17, 2022
21 °C

ಬಾಲಕಿ ಮೇಲೆ ಐವರು ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನಗರದ ಕಾಲೊನಿಯೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಐವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಜನವರಿ 5ರಂದು ನಡೆದಿದ್ದು, ಬಾಲಕಿಯ ಪಾಲಕರು ಸೋಮವಾರ ದೂರು ದಾಖಲಿಸಿದ್ದಾರೆ.

ಬಾಲಕಿ ಬುದ್ಧಿಮಾಂದ್ಯಳಾಗಿದ್ದರಿಂದ ವಿಷಯ ತಡವಾಗಿ ಗೊತ್ತಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತಮ್ಮ ಮನೆಯ ಹತ್ತಿರದಲ್ಲೇ ಇರುವ 15 ರಿಂದ 16 ವರ್ಷದ ಹುಡುಗರು ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ಪಾಲಕರು ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

‘ಕೃತ್ಯ ಎಸಗಿದ ಬಾಲಕರೆಲ್ಲರೂ ಬಾಲಕಿಯ ಪಾಲಕರಿಗೆ ಪರಿಚಯಸ್ಥರು. ಹೀಗಾಗಿ, ಅವರನ್ನು ಸುಲಭವಾಗಿ ಪತ್ತೆ ಮಾಡಲಾಗಿದ್ದು, ಮಂಗಳವಾರ (ಜ. 11) ವಶಕ್ಕೆ ಪಡೆಯಲಾಗುವುದು’ ಎಂದು ಸಿಪಿಐ ಶಿವಾನಂದ ಗಾಣಿಗೇರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.